ಕೂಡಿಗೆ, ಜೂ. ೧೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಶ್ರೀ ಮಾರಿಯಮ್ಮ ದೇವಿಯ ವಾರ್ಷಿಕ ಪೂಜೋತ್ಸವ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಶ್ರೀ ಮಾರಿಯಮ್ಮ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ಎರಡು ದಿನಗಳವರೆಗೆ ನಡೆದವು.

ಪೂಜೋತ್ಸವ ಕಾರ್ಯಕ್ರಮದಲ್ಲಿ ಕೂಡಿಗೆ, ಮಾದಲಾಪುರ, ಹುದುಗೂರು, ಸೀಗೆಹೊಸೂರು, ಭುವನಗಿರಿ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು. ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಸೇವಾ ಸಮಿತಿಯ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಪ್ರಮುಖರಾದ ಅರುಣ್, ಚಂದನ್, ಸುನಿಲ್, ಕಿರಣ್ ಸೇರಿದಂತೆ ಅನೇಕ ಭಕ್ತರು ಹಾಜರಿದ್ದರು.