ವೀರಾಜಪೇಟೆ, ಜೂ. ೧೬: ಮಂಗಳೂರಿನ ಪ್ರಾಧ್ಯಾಪಕ ಡಾ. ಪ್ರಶಾಂತ್ ರಾವ್ ಅವರು ಜಿಲ್ಲೆಯ ಸಿ.ಇ.ಟಿ, ಜೆ.ಇ.ಇ. ಹಾಗೂ ನೀಟ್ ಆಕಾಂಕ್ಷಿಗಳಿಗೆ ಜುಲೈ ೨ ರಂದು ಉಚಿತ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ ಎಂದು ಚಾಣಕ್ಯ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷೆ ಕವಿತಾ ಸಿ.ಎನ್. ಅ ವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೀರಾಜಪೇಟೆ ಪಟ್ಟಣದ ತೆಲುಗರ ಬೀದಿಯಲ್ಲಿನ ಚಾಣಕ್ಯ ಎಜುಕೇಶನ್ ಟ್ರಸ್ಟ್ನಲ್ಲಿ ಜುಲೈ ೨ ರಂದು ಬೆಳಿಗ್ಗೆ ೯ ರಿಂದ ೧೦ ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ.

ಪ್ರಥಮ ಹಾಗೂ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ಯಾವುದೇ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ.