ಸುಂಟಿಕೊಪ್ಪ, ಜೂ. ೧೫: ಸುಂಟಿಕೊಪ್ಪ ಡಾ. ಅಂಬೇಡ್ಕರ್ ಸಂಘದ ವತಿಯಿಂದ ಅವರ ಜಯಂತಿ ಪ್ರಯುಕ್ತ ಡೊಳ್ಳುಕುಣಿತ ಹಾಗೂ ಪೂಜಾ ಕುಣಿತದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ನಡೆಸಲಾಯಿತು. ಬಸ್ ನಿಲ್ದಾಣದ ಬಳಿಯಲ್ಲಿ ಶಾಸಕ ಡಾ. ಮಂಥರ್ ಗೌಡ ಅವರು ಚಾಲನೆ ನೀಡಿದರು. ನಂತರ ಸುಂಟಿಕೊಪ್ಪ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ಸಂದರ್ಭ ಡಾ. ಅಂಬೇಡ್ಕರ್ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಫ್. ಸಬಾಸ್ಟೀನ್, ಅಂಬೇಡ್ಕರ್ ಸಂಘದ ಅಧ್ಯಕ್ಷ ರವಿ, ಕಾವೇರಪ್ಪ ಸೇರಿದಂತೆ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.