ಕರಿಕೆ, ಜೂ. ೧೬: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿತ್ತು. ಆರೋಗ್ಯ ಶಿಬಿರದಲ್ಲಿ ರಕ್ತದೊತ್ತಡ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ, ಹಿಮೋಗ್ಲೋಬಿನ್ ಅಂಶ ಮತ್ತು ದೈಹಿಕ ಪರೀಕ್ಷೆಗಳನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಜಗದೀಶ್ ಉದ್ಘಾಟಿಸಿದರು. ಶಿಬಿರವನ್ನು ವೈದ್ಯರುಗಳಾದ ಡಾ.ಪುಂಡಲೀಕೃಷ್ಣ, ಡಾ. ಪಲ್ಲವಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಣಪತಿ, ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.