ವೀರಾಜಪೇಟೆ, ಜೂ. ೧೫: ವೀರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಾಲು ಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೈ.ಬಿ. ಸೀತಮ್ಮ ಚಾಲನೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ ರಕ್ತ ಪರೀಕ್ಷೆಗಳನ್ನು ಕೈಗೊಂಡು ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬAಧಿಸಿದAತೆ ತಪಾಸಣೆ ಕೈಗೊಳ್ಳಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಸಿ. ದಿನೇಶ್, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.