ಶನಿವಾರಸಂತೆ, ಜೂ. ೧೬ : ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಭಾಗಿತ್ವದಲ್ಲಿ ತಾ. ೧೭ ರಂದು (ಇಂದು) ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸ್ವಯಂ ರಕ್ತದಾನ ಶಿಬಿರವನ್ನು ನಂದಿಗುAದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕೆ. ಇಂದೂಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.