ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ
ಬೆAಗಳೂರು, ಜೂ. ೧೬: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಭಾರತೀಯ ಆಹಾರ ನಿಗಮ ಕೊಟ್ಟಿರುವ ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ್ದಾರೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ. ಕಮಿಟ್‌ಮೆಂಟ್ ಪತ್ರ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು. ಸಿ.ಟಿ. ರವಿ ಮತ್ತು ಬಿಜೆಪಿ ಕರ್ನಾಟಕ ನಾಯಕರು ಮೊದಲು ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಕಿಡಿಕಾರಿದ್ದಾರೆ.
ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್
ಬೆಂಗಳೂರು, ಜೂ. ೧೬: ರಾಷ್ಟçಮಟ್ಟದಲ್ಲಿ ಸದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಬೆಂಗಳೂರಿನ ಸಿಬಿಐ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ೨೦೧೨ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಪಿ.ಬಿ. ಅವರು, ಆರೋಪಿ ಸಂತೋಷ್ ರಾವ್‌ನನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಬರೋಬ್ಬರಿ ೧೧ ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಹೇಳಿದೆ. ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಕ್ಟೋಬರ್ ೯, ೨೦೧೨ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು, ಮರು ದಿನ ರಾತ್ರಿ ಮಣ್ಣಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಈ ಸಂಬAಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಸಂತೋಷ್ ರಾವ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿಯನ್ನು ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಮಾಜಿ ಡಿಜಿಪಿಗೆ ಮೂರು ವರ್ಷ ಜೈಲು
ವಿಲ್ಲುಪುರಂ, ಜೂ. ೧೬: ಯುವ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಮಾಜಿ ವಿಶೇಷ ಡಿಜಿಪಿ ರಾಜೇಶ್ ದಾಸ್ ಅವರನ್ನು ಕೋರ್ಟ್ ದೋಷಿ ಎಂದು ಶುಕ್ರವಾರ ಘೋಷಿಸಿದ್ದು, ಮೂರು ವರ್ಷ ಜೈಲು ಶಿಕ್ಷೆ ಮತ್ತು ರೂ. ೨೦,೫೦೦ ದಂಡ ವಿಧಿಸಿದೆ. ೨೦೨೧ ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ನಡೆಸಿದ ವಿಲ್ಲುಪುರಂ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟೆçÃಟ್ ಎಂ. ಪುಷ್ಪರಾಣಿ ಅವರು ಇಂದು ತೀರ್ಪು ನೀಡಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸುವುದನ್ನು ತಡೆಯಲು ಯತ್ನಿಸಿದ ಚೆಂಗಲ್ಪಟ್ಟು ಜಿಲ್ಲೆಯ ಮಾಜಿ ಎಸ್ಪಿ ಎಸ್. ಕಣ್ಣನ್ ಅವರನ್ನು ಕೋರ್ಟ್ ದೋಷಿ ಎಂದು ಘೋಷಿಸಿದ್ದು, ಅವರಿಗೆ ದಂಡ ವಿಧಿಸಿದೆ. ಆದರೆ ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ. ಫೆಬ್ರವರಿ ೨೧, ೨೦೨೧ ರಂದು ನಾಮಕ್ಕಲ್‌ನಲ್ಲಿ ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಭೆಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದಾಗ ದಾಸ್ ಅವರು ಯುವ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಹಣ ಪಡೆದು ಕಿರುತೆರೆ ನಟನಿಗೆ ವಂಚನೆ: ನಟಿ ಉಷಾ ಬಂಧನ
ಶಿವಮೊಗ್ಗ, ಜೂ. ೧೬: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ರವಿಶಂಕರ್ ಕಿರುತೆರೆ ನಟ ಶರವಣನ್ ಅವರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದರು. ಈ ಸಂಬAಧ ನಟಿ ವಿರುದ್ಧ ಕೋರ್ಟ್ನಲ್ಲಿ ಶರವಣನ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬAಧ ನಟಿಗೆ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆ ವೇಳೆ ಕೋರ್ಟ್ಗೆ ನಟಿ ಗೈರಾಗಿದ್ದರಿಂದ ಆಕೆಯ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಷಾ ರವಿಶಂಕರ್ ಕನ್ನಡದ ಸಲಗ ಚಿತ್ರ ಸೇರಿದಂತೆ ಹಲವು ಸಿನಿಮಾ ಹಾಗೂ ಕೆಲ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಪೇದೆ ಮೇಲೆ ಟ್ರ‍್ಯಾಕ್ಟರ್ ಹರಿಸಿ ಹತ್ಯೆ
ಕಲಬುರಗಿ, ಜೂ. ೧೬: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್‌ಕಾನ್‌ಸ್ಟೇಬಲ್ ಮೇಲೆ ಟ್ರ‍್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ‍್ಯಾಕ್ಟರ್ ಅನ್ನು ತಡೆಯಲು ಬಂದ ಕಾನ್‌ಸ್ಟೇಬಲ್ ಮೇಲೆ ಟ್ರ‍್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಪ್ರಮುಖ ಆರೋಪಿ ಟ್ರ‍್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ. ಜೂನ್ ೧೫ ರಂದು ಕಲಬುರಗಿಯ ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರಾö್ಯಕ್ಟರ್ ಅನ್ನು ಹೆಡ್ ಕಾನ್‌ಸ್ಟೇಬಲ್ ಮಯೂರ ಚೌಹಾಣ್ (೫೧) ಅವರು ತಡೆಯಲು ಪ್ರಯತ್ನಿಸುತ್ತಿದ್ದಾಗ ಘಟನೆ ನಡೆದಿದೆ ಎಂದು ಎಸ್.ಪಿ. ತಿಳಿಸಿದ್ದಾರೆ.