ಸುಂಟಿಕೊಪ್ಪ, ಜೂ. ೧೬: ಕುಶಾಲನಗರ ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಹಾಗೂ ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವು ರೈತ ಸಹಕಾರ ಭವನದಲ್ಲಿ ತಾ. ೧೮ ರಂದು (ನಾಳೆ) ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾ. ೧೮ ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಆದಿ ಚುಂಚನಗಿರಿ ಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಹಾಸನ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಮಾರಂಭ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ನ ಅಧ್ಯಕ್ಷ ಸಿ.ಟೊಸೋಮಶೇಖರ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ, ಸೇವೆಯನ್ನು ಸಲ್ಲಿಸಿದವರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ.