ನಾಪೋಕ್ಲು, ಜೂ. ೧೫: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ಅಖಿಲ ಕೊಡವ ಸಮಾಜದ ವತಿಯಿಂದ ಆಶ್ರಮದ ಹಿರಿಯ ಸ್ವಾಮೀಜಿಗಳಾದ ಶತಾಯುಷಿ ಶ್ರೀ ವಿವೇಕಾನಂದ ಶರಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ನೂತನ ಶಾಸಕ ಎ.ಎಸ್. ಪೊನ್ನಣ್ಣ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಉಪಾಧ್ಯಕ್ಷ ಅಜ್ಜಿಕುಟ್ಟಿರ ಸುಬ್ರಮಣಿ ಮಾದಯ್ಯ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪAಡ ಸುಗುಣ ಮುತ್ತಣ್ಣ, ಯೂತ್ ವಿಂಗ್ ಅಧ್ಯಕ್ಷ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ ಹಾಗೂ ಕೀತಿಯಂಡ ವಿಜಯಕುಮಾರ್ (ಶರಿ) ಹಾಜರಿದ್ದರು.