ಮಡಿಕೇರಿ, ಜೂ. ೧೫: ಗೋಣಿಕೊಪ್ಪಲಿನ ಚೇಂಬರ್ ಆಫ್ ಕಾಮರ್ಸ್ ಮತ್ತು ದಿ ಮರ್ಚೆಂಟ್ಸ್ ಕ್ರೆಡಿಟ್ ಕೋ.ಆಪರೇಟಿವ್ ಬ್ಯಾಂಕ್ ಗೋಣಿಕೊಪ್ಪ ಸಂಯುಕ್ತ ಆಶ್ರಯದಲ್ಲಿ ನೂತನ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಅಭಿನಂದನಾ ಸಮಾರಂಭ ಗೋಣಿಕೊಪ್ಪಲಿನ ಕುಕೂನ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಚೇಂಬರ್ ಆಫ್ ಕಾಮರ್ಸ್ ಪ್ರಮುಖರಾದ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಗಿರೀಶ್ ಗಣಪತಿ ಹಾಗೂ ನಿರ್ದೇಶಕ ಅಜಿತ್ ಅಯ್ಯಪ್ಪ, ಸುಮಿ ಸುಬ್ಬಯ್ಯ, ಅನಿತಾ, ದಿ ಮರ್ಚೆಂಟ್ಸ್ ಕ್ರೆಡಿಟ್ ಕೋ. ಆಪರೇಟಿವ್ ಬ್ಯಾಂಕ್ ನಿರ್ದೇಶಕ ಬಿ.ಎನ್. ಪ್ರಕಾಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಪೊನ್ನಿಮಾಡ ಸುರೇಶ್, ದಿ ಮರ್ಚೆಂಟ್ಸ್ ಕ್ರೆಡಿಟ್ ಕೋ.ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ, ಕನ್ನಡ ಪರಿಷತ್ ಸಾಹಿತ್ಯ ಜಿಲ್ಲಾಧ್ಯಕ್ಷ ಕೇಶವ್‌ಕಾಮತ್ ಪ್ರಮುಖರು ಭಾಗಿಗಳಾಗಿದ್ದರು.