ಶನಿವಾರಸಂತೆ, ಜೂ. ೧೬: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಪ್ರಿಕೆಜಿ, ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ - ಶಾರದಾ ಪೂಜೆ ಹಾಗೂ ವಿಘ್ನ ವಿನಾಶಕ ವಿನಾಯಕನ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಭಾರತೀಯ ಸಂಸ್ಕೃತಿಯ ಸಂಪ್ರದಾಯದAತೆ ವಿದ್ಯಾರ್ಥಿಗಳ ಪೋಷಕರು ತಮ್ಮ ತಮ್ಮ ಮಕ್ಕಳ ಕೈಯಲ್ಲಿ ಅಕ್ಕಿಯಲ್ಲಿ ‘ಓಂಕಾರ’ ಬರೆಸುವ ಮೂಲಕ ಅಕ್ಷರ ಅಭ್ಯಾಸಕ್ಕೆ ಚಾಲನೆ ನೀಡಲಾಯಿತು. ನಂತರ ನಡೆದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಗಳು, ಅವರ ಸ್ವಚ್ಛತೆ, ಕಲಿಕೆ, ಕಾಳಜಿ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು.