ಮಡಿಕೇರಿ, ಜೂ. ೧೬: ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ತಾ. ೧೮ ರಂದು (ನಾಳೆ) ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ ಮುರಳೀಧರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗೌರವ ಅತಿಥಿಯಾಗಿ ರಕ್ಷಣಾ ಪಡೆಗಳ ಆಸ್ಪತ್ರೆ ಸೇವಾ ವಿಭಾಗದ ಮಾಜಿ ಮಹಾ ನಿರ್ದೇಶಕರು, ರಾಷ್ಟçಪತಿಗಳ ಗೌರವ ಚಿಕಿತ್ಸಕರಾದ ಲೆ.ಜ. ಡಾ. ಬಿ.ಎನ್.ಬಿ.ಎಂ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕರಾದ ಡಾ.ಮಂಥರ್‌ಗೌಡ, ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರ ರೋಷನ್ ಅಪ್ಪಚ್ಚು, ಕೊಡಗು ರೆಡ್ ಕ್ರಾಸ್ ಸಭಾಪತಿಗಳಾದ ಬಿ.ಕೆ ರವೀಂದ್ರ ರೈ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.