ಮಡಿಕೇರಿ, ಜೂ. ೧೭: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

೧೮ ವರ್ಷ ತುಂಬಿದ ಪಟ್ಟಣ/ ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂ. ೦೮೨೭೨-೨೨೮೪೩೧/ ೨೨೮೭೪೬ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.