ಮಡಿಕೇರಿ, ಜೂ. ೧೬ : ಅಂರ‍್ರಾಷ್ಟಿçÃಯ ೯ನೇ ಯೋಗ ದಿನಾಚರಣೆ ಪ್ರಯುಕ್ತ ತಾ. ೧೭ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಯೋಗ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಚಾಲನೆ ನೀಡಲಿದ್ದಾರೆ.

ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವರ್ಡನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ ಮೂಲಕ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೆ ಯೋಗ ಜಾಥಾ ನಡೆಯಲಿದೆ.

ನಂತರ ಸಂಜೆ ೬ ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ಮಂಗಳೂರು ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗ ವಿದ್ಯಾಲಯದ ಪ್ರಾಚಾರ್ಯ ಡಾ. ಪುನೀತ್ ರಾಘವೇಂದ್ರ ಅವರು ಯೋಗದ ಮಹತ್ವ ಕುರಿತು ಮಾಹಿತಿ ನೀಡಲಿದ್ದಾರೆ.