ಕುಶಾಲನಗರ, ಜೂ. ೧೬: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಕಾವೇರಿ ನದಿಗೆ ನೇರವಾಗಿ ಕಲುಷಿತ ನೀರು ಸೇರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ವಾಣಿಜ್ಯ ಕಟ್ಟಡಗಳ ಮಾಲೀಕರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಸಂಚಾಲಕ ಚಂದ್ರಮೋಹನ್ ಅವರ ದೂರಿನ ಹಿನ್ನೆಲೆ ಉಪ ವಿಭಾಗ ಅಧಿಕಾರಿಗಳು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಈ ಸಂಬAಧ ಚರ್ಚೆ ನಡೆಸಿ ಮಾತನಾಡಿದರು.

ವಾಣಿಜ್ಯ ಕಟ್ಟಡಗಳಿಂದ ಚರಂಡಿ ಮೂಲಕ ನೇರವಾಗಿ ಕಲುಷಿತ ತ್ಯಾಜ್ಯ ಕಾವೇರಿ ಒಡಲು ಸೇರದಂತೆ ಸೂಕ್ತ ಕ್ರಮ ಕೈಗೊಳ್ಳಲು ಕಟ್ಟಡಗಳ ಮಾಲೀಕರಿಗೆ ಸಭೆ ಕರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭ ಪುರಸಭೆ ಮುಖ್ಯ ಅಧಿಕಾರಿ ಶಿವಪ್ಪ ನಾಯಕ್, ಆರೋಗ್ಯ ಅಧಿಕಾರಿ ಉದಯಕುಮಾರ್ ಮತ್ತಿತರರು ಇದ್ದರು.