ಕೂಡಿಗೆ, ಜೂ. ೧೭: ತಾಲೂಕು ಅರಣ್ಯ ಇಲಾಖೆ, ಹೆಬ್ಬಾಲೆ ಉಪವಲಯ, ಕಣಿವೆಯ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಣಿವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಬಿತ್ತೋತ್ಸವ ಮತ್ತು ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆಯನ್ನು ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಭರತ್ ನೀಡಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿAದಲೇ ಗಿಡಮರಗಳ ಸಂರಕ್ಷಣೆಯ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ರಕ್ಷಣೆ ಮಾಡಬೇಕು ಎಂದರು.
ಈ ಸಂದರ್ಭ ಅರಣ್ಯ ರಕ್ಷಕ ರಾಜಪ್ಪ, ಕಣಿವೆ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕರುಂಬಯ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.