*ಗೋಣಿಕೊಪ್ಪ, ಜೂ. ೧೭: ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೨೦೨೨ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ‘ಶಕ್ತಿ’ ವರದಿಗಾರ ಅಣ್ಣೀರ ಹರೀಶ್ ಮಾದಪ್ಪ ಹಾಗೂ ವಿಜಯ ಕರ್ನಾಟಕ ವರದಿಗಾರ ಕೆ.ಬಿ. ಜಗದೀಶ್ ಜೋಡುಬೀಟಿ ಭಾಜನರಾಗಿದ್ದಾರೆ.
ರಾಷ್ಟಿçÃಯ ಸಮಿತಿ ಸದಸ್ಯರಾಗಿದ್ದ ಎಸ್.ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಅಣ್ಣೀರ ಹರೀಶ್ ಮಾದಪ್ಪ ಅವರ ‘ಮನ್ನೆರ ಕ್ರಿಕೆಟ್ ಕಪ್ ; ಬೊಟ್ಟಂಗಡ ಚಾಂಪಿಯನ್’ ವರದಿ ಪಡೆದುಕೊಂಡಿದೆ.
ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಕೆ.ಬಿ. ಜಗದೀಶ್ ಜೋಡುಬೀಟಿ ಅವರ ‘ಕಾಡುಮಕ್ಕಳ ಜೋಪಡಿಗಳಲ್ಲಿ ಇನ್ನೂ ಕತ್ತಲು’ ವರದಿ, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಕೆ.ಬಿ. ಜಗದೀಶ್ ಜೋಡುಬೀಟಿ ಅವರ ‘ಕೊಡಗಿನಲ್ಲಿ ೩೧ ಕೆರೆಗಳಿಗೆ ಜೀವಕಳೆ’ ವರದಿ ಪಡೆದುಕೊಂಡಿದೆ.
ತಾ. ೩೦ ರಂದು ನಡೆಯುವ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್ ತಿಳಿಸಿದ್ದಾರೆ.