ಕಡಂಗ, ಜೂ. ೧೭: ಕೊಡಗಿನ ಉಸ್ತುವಾರಿ ಸಚಿವರಾಗಿ ನೇಮಕಗೊಂಡು ಪ್ರಥಮ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಎನ್. ಭೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ನೂತನ ಶಾಸಕ ಡಾ. ಮಂಥರ್ ಗೌಡ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಗೌರವಿಸಿದರು.
ಈ ಸಂದರ್ಭ ಯುವ ಕಾಂಗ್ರೆಸ್ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಪರವಂಡ ಸಿರಾಜ್, ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಮುತ್ತು ರಶೀದ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ದೇವಪ್ಪ, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಕಾAತ್, ಮಡಿಕೇರಿ ಬ್ಲಾಕ್ ಎಸ್‌ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಶಂಶೀರ್ ಮತ್ತಿತರರು ಹಾಜರಿದ್ದರು.