ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ಬಂದ್
ಬೆAಗಳೂರು, ಜೂ. ೧೮: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟಿç ತಾ. ೨೨ ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವAತೆ ತಾ. ೧೦ ರಂದು ಕೆಸಿಸಿಐ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು. ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟಿçÃಸ್ ಬಂದ್ಗೆ ಕರೆ ನೀಡಿದೆ.
ವಿದ್ಯುತ್ ದರ ಏರಿಕೆ ಸಮಸ್ಯೆಗೆ ಪರಿಹಾರ - ಸಿದ್ದರಾಮಯ್ಯ
ಬೆಂಗಳೂರು, ಜೂ. ೧೮: ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟಿç ತಾ. ೨೨ ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿAದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದರು. ಮುಂದಿನ ತಿಂಗಳಿನಿAದ ಒಂದೇ ತಿಂಗಳ ಬಿಲ್ ಬರುವುದರಿಂದ ಎಲ್ಲವೂ ಸರಿಯಾಗಲಿದೆ. ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಎಫ್ ಕೆಸಿಸಿಯವರ ಜೊತೆಗೆ ಸಂಬAಧಿಸಿದ ಸಚಿವರು ಮಾತನಾಡಿ ಮನವೊಲಿಸಲಿದ್ದಾರೆ ಎಂದು ಅವರು ತಿಳಿಸಿದರು.
ಹಿಂಸಾಚಾರ ಕುರಿತು ಪ್ರಧಾನಿ ಮೌನ - ಕಾಂಗ್ರೆಸ್ ಆಕ್ಷೇಪ
ನವದೆಹಲಿ, ಜೂ. ೧೮: ಪ್ರಧಾನಿ ನರೇಂದ್ರ ಮೋದಿ ಇಂದು ಆಕಾಶವಾಣಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಣಿಪುರದಲ್ಲಿ ಹಿಂಸಾಚಾರ ಕುರಿತು ಮಾತನಾಡದಿರುವುದಕ್ಕೆ ಅವರ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. ಮಣಿಪುರದಲ್ಲಿ ಕಳೆದೊಂದು ತಿಂಗಳಿನಿAದ ನಡೆಯುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ೧೦೦ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮತ್ತೊಂದು ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಮೌನ ವಹಿಸಿದ್ದಾರೆ. ವಿಪತ್ತು ನಿರ್ವಹಣೆಯಲ್ಲಿ ಭಾರತದ ಶ್ರೇಷ್ಠ ಸಾಮರ್ಥ್ಯಗಳಿಗಾಗಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಪ್ರಧಾನಿ, ಮಣಿಪುರವನ್ನು ಎದುರಿಸುತ್ತಿರುವ ಸಂಪೂರ್ಣ ಮಾನವ ನಿರ್ಮಿತ ಮಾನವೀಯ ದುರಂತದ ಬಗ್ಗೆ ಏನು? ಎಂದು ಪ್ರಶ್ನಿಸಿದ್ದಾರೆ. ಇನ್ನೂ ಶಾಂತಿ ಕಾಪಾಡುವಂತೆ ಪ್ರಧಾನಿ ಮನವಿ ಮಾಡಿಲ್ಲ. ಲೆಕ್ಕಪರಿಶೋಧನೆ ಮಾಡಲಾಗದ ಪಿಎಂ-ಕೇರ್ಸ್ ಫಂಡ್ ಇದೆ ಆದರೆ ಪ್ರಧಾನಿ ಮಣಿಪುರದ ಬಗ್ಗೆ ಕಾಳಜಿ ವಹಿಸುತ್ತಾರೆಯೇ ಎಂಬುದು ನಿಜವಾದ ಪ್ರಶ್ನೆ ಎಂದಿದ್ದಾರೆ.
ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ
ಜಕಾರ್ತಾ, ಜೂ. ೧೮: ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಫೈನಲ್ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್ ಸೂಪರ್-೧೦೦೦ನಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹಿರಿಮೆ ಪಾತ್ರರಾಗಿದ್ದರು. ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ ೨೧-೧೭, ೨೧-೧೮ ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-೧೦೦೦ ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಪ್ರವಾಹ, ಭೂಕುಸಿತದಿಂದ ಸಿಲುಕಿದ್ದ ೩೦೦ ಪ್ರವಾಸಿಗರ ರಕ್ಷಣೆ
ಸಿಕ್ಕಿಂ, ಜೂ. ೧೮: ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ ೩೦೦ ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚರಣೆ ವೇಳೆಯಲ್ಲಿ ಪ್ರವಾಸಿಗರಿಗೆ ಆಹಾರ, ಸೂಕ್ತ ವೈದ್ಯಕೀಯ ನೆರವು ಹಾಗೂ ವಿಶ್ರಾಂತಿ ಸ್ಥಳವನ್ನು ಒದಗಿಸಲಾಗಿದೆ ಎಂದು ಸೇನೆಯ ಪಿಆರ್ಓ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಹೇಳಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿಯನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಭಾಗದಲ್ಲಿ ಗುರುವಾರದಿಂದ ದಿಢೀರ್ ಭಾರಿ ಮಳೆಯಿಂದಾಗಿ ಹಲವೆಡೆ ಭೂ ಕುಸಿತವಾಗಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.
ತುಕ್ಕು ಹಿಡಿದ ಸ್ಫೋಟಕ ವಸ್ತುಗಳ ವಶ
ಜಮ್ಮು, ಜೂ. ೧೮: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಕೆಳಗೆ ಭದ್ರತಾ ಪಡೆ ೧೧ ಆರ್ಪಿಜಿ ರೌಂಡ್ಗಳು ಮತ್ತು ಗ್ರೆನೇಡ್ಗಳು ಸೇರಿದಂತೆ ದೊಡ್ಡ ಪ್ರಮಾಣದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಸೆರಿ ಚೋವಾನಾ ಅರಣ್ಯದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಹಲವಾರು ಗ್ರೆನೇಡ್ಗಳನ್ನು ಒಳಗೊಂಡಿರುವ ಸ್ಫೋಟಕ ವಸ್ತುಗಳನ್ನು ಬಂಡೆಗಳ ಕೆಳಗೆ ಮರೆಮಾಡಲಾಗಿದೆ. ಎರಡು ದಶಕಗಳ ಹಿಂದೆ ಭಯೋತ್ಪಾದಕರು ಅಲ್ಲಿ ಇರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ನಿಷ್ಕಿçಯ ದಳದ ತಜ್ಞರೊಂದಿಗೆ ಭದ್ರತಾ ಪಡೆಗಳು ಸುಮಾರು ೫೦ ಸಂಖ್ಯೆಯ ಎಲ್ಲಾ ಸ್ಫೋಟಕ ವಸ್ತುಗಳನ್ನು ನಾಶಪಡಿಸಿವೆ ಎಂದು ಅವರು ಹೇಳಿದರು.
ಪಠ್ಯಪುಸ್ತಕ ಪರಿಷ್ಕರಣೆ:೧೦ ದಿನಗಳೊಳಗೆ ಕಿರು ಪುಸ್ತಕಗಳ ವಿತರಣೆ
ಬೆಂಗಳೂರು, ಜೂ. ೧೮: ಪಠ್ಯಪುಸ್ತಕಗಳಲ್ಲಿನ ಬದಲಾವಣೆಗಳನ್ನು ಒಳಗೊಂಡಿರುವ ಪೂರಕ ಕಿರುಪುಸ್ತಕಗಳನ್ನು ೧೦ ದಿನಗಳೊಳಗೆ ವಿತರಿಸ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿಲ್ಲ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಮಾಡಿದ ಬದಲಾವಣೆಗಳನ್ನು ಮಾತ್ರ ಬದಲಿಸಲಾಗಿದೆ ಎಂದು ಹೇಳಿದರು. ಮಕ್ಕಳ ಹಿತದೃಷ್ಟಿಯಿಂದ ಕೆಲವು ಅಧ್ಯಾಯಗಳನ್ನು ಸಂಪೂರ್ಣವಾಗಿ ಅಲ್ಲದಿದ್ದರೂ ನಂತರ ಪದಗಳು ಮತ್ತು ವಾಕ್ಯಗಳ ಮೂಲಕ ಬದಲಾಯಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಕಿರು ಪುಸ್ತಕಗಳನ್ನು ವಿತರಿಸುತ್ತಿರುವುದರಿಂದ ಶಿಕ್ಷಣ ಇಲಾಖೆಗೂ ದೊಡ್ಡ ಹೊರೆಯಾಗುವುದಿಲ್ಲ. ಸರಿಸುಮಾರು ಹತ್ತರಿಂದ ಹನ್ನೆರಡು ಲಕ್ಷ ವೆಚ್ಚವಾಗುತ್ತದೆ ಎಂದು ತಿಳಿಸಿದರು.
ಕಾಲೇಜು ವಿದ್ಯಾರ್ಥಿಗೆ ಚಾಕು ಇರಿದು ಹತ್ಯೆ
ನವದೆಹಲಿ, ಜೂ. ೧೮: ರಾಷ್ಟç ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿದೆ. ತರಗತಿಯಲ್ಲಿ ಹಾಜರಾಗಿದ್ದ ಕೊಲೆಯಾದ ವಿದ್ಯಾರ್ಥಿ ಹಾಗೂ ಆರೋಪಿ ನಡುವೆ ಜಗಳ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಗುರುತಿಸಲಾಗಿದ್ದು, ಪತ್ತೆ ಹಚ್ಚಲಾಗುತ್ತಿದೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.