ಕೂಡಿಗೆ, ಜೂ. ೧೮: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕೂಡಿಗೆ ಪದವಿಪೂರ್ವ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪಿ.ಯು. ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ಉದ್ಯಮ ಶೀಲತೆಗೆ ಸಂಬAಧಿಸಿದAತೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಉಮಾ ನೆರವೇರಿಸಿ ನಂತರ ಮಾತನಾಡಿ, ಪದವಿಪೂರ್ವ ತರಗತಿಯ ಹಂತದ ವಿದ್ಯಾರ್ಥಿಗಳ ಬದುಕಿನ ಹಂತವನ್ನು ರೂಪಿಸುವ ಸಮಯವಾಗಿರುತ್ತದೆ. ಅದರ ಮೂಲಕ ವಿದ್ಯಾರ್ಥಿಗಳು ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಸಮರ್ಪಕವಾದ ಮಾಹಿತಿಯನ್ನು ಪಡೆದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಇಲಾಖೆಯ ಸಹಾಯಕ ಸಂಖ್ಯಾತಕ ಅಧಿಕಾರಿ ರೂಪ ಇಲಾಖೆಯ ಯೋಜನೆಗೆ ಸಂಬAಧಿಸಿದAತೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ಕಾಲೇಜಿನ ಹಿರಿಯ ಉಪನ್ಯಾಸಕ ನಾಗಪ್ಪ ಏಲಕ್ಕಿಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕ ರಮೇಶ್ ಸ್ವಾಗತಿಸಿ, ಹನುಮರಾಜ್ ವಂದಿಸಿ, ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.