ಮಡಿಕೇರಿ ಜೂ. ೧೮: ಅಂತರ ರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಯೋಗ ಜಾಥಾವೂ ನಗರದ ಪ್ರಮುಖ ರಸ್ತೆಯಲ್ಲಿ ಶನಿವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಗಾಂಧಿ ಮೈದಾನ ದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರ ಆರೋ ಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯೋಗ ಸಂಘಟನ್ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೩ ರ ೯ನೇ ವಿಶ್ವ ಯೋಗ ದಿನಾ ಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಿಂದ ಕೆಎಸ್ ಆರ್ಟಿಸಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು.
ಜೂನ್ ೨೧ ರಂದು ನಡೆಯ ಲಿರುವ ಯೋಗ ದಿನಾಚರಣೆಯಲ್ಲಿ ಶಾಲಾ ಮಕ್ಕಳು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಈ ಬಾರಿಯ ಘೋಷವಾಕ್ಯ ವಸುದೈವ ಕುಟುಂಬಕ್ಕಾಗಿ ಯೋಗ ಆಗಿರುವುದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಯೋಗದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಜಾಥಾದಲ್ಲಿ ನಗರಸಭೆ ಅಧ್ಯಕ ರಾದ ಅನಿತಾ ಪೂವಯ್ಯ, ಜಿ.ಪಂ. ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ನಂಜುAಡಯ್ಯ, ಪೌರಾಯುಕ್ತರಾದ ವಿಜಯ, ವೈದ್ಯಾಧಿಕಾರಿ ಡಾ.ರಾಜಾರಾಂ ಇತರರು ಪಾಲ್ಗೊಂಡಿದ್ದರು.