ಮಡಿಕೇರಿ, ಜೂ. ೧೮: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ೩೦ ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊAಡ ಕೊಡಗು ಜಿಲ್ಲಾ ಪೊಲೀಸ್ ವಿಪತ್ತು ನಿರ್ವಹಣಾ ತಂಡದಿAದ ಜಿಲ್ಲೆಯ ಮಡಿಕೇರಿ ತಾಲೂಕು ಮದೆನಾಡು ಗ್ರಾಮ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆಯನ್ನು ನಡೆಸುವ ಬಗ್ಗೆ ಅಭ್ಯಾಸವನ್ನು ನಡೆಸಲಾಯಿತು.

ಈ ಅಭ್ಯಾಸ ಕಾರ್ಯಾಚರಣೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರ ನೇತೃತ್ವದಲ್ಲಿ ನಡೆದಿದ್ದು, ಈ ಸಂದರ್ಭ ಜಿಲ್ಲೆಯ ಅಡಿಷನಲ್ ಎಸ್.ಪಿ. ಸುಂದರ್‌ರಾಜ್ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಯವರು ಭಾಗವಹಿಸಿದ್ದರು.