ಕುಶಾಲನಗರ, ಜೂ. ೧೯: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮೂಲಕ ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಅಕಾಡೆಮಿ ನಿರ್ದೇಶಕರಾದ ಬಿ ಆರ್ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ವಾಸವಿ ಅಕಾಡೆಮಿ ಮೂಲಕ ೨೫ ವಿದ್ಯಾರ್ಥಿಗಳಿಗೆ ಉಚಿತ ಅವಕಾಶ ಕಲ್ಪಿಸಲಾಗುವುದು. ಇನ್ನುಳಿದ ೪೫ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ಶುಲ್ಕದಲ್ಲಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ವಾಸವಿ ಅಕಾಡೆಮಿ ಕರ್ನಾಟಕ ಆರ್ಯವೈಶ್ಯ ಮಹಾಸಭೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಸೇವಾ ಸಂಸ್ಥೆಯಾಗಿದೆ. ಒಂದು ಶತಮಾನಕ್ಕಿಂತಲೂ ಅಧಿಕ ಸಮಯದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿಕ್ಷಣ ಆರೋಗ್ಯ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು ಸಾವಿರಾರು ವಿದ್ಯಾರ್ಥಿಗಳ ಉನ್ನತಿಗೆ ಕಾರಣವಾಗಿದೆ ಎಂದು ತಿಳಿಸಿದರು.

೨೦೨೪ರಲ್ಲಿ ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿಗಳನ್ನು ಜೂನ್ ೨೫ರ ಒಳಗೆ ಸಲ್ಲಿಸುವಂತೆ ಕೋರಿದ್ದಾರೆ. ಈ ಸಾಲಿನ ಬ್ಯಾಚಿಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಜುಲೈ ೨ರಂದು ಬೆಂಗಳೂರು ನಗರದಲ್ಲಿ ಪ್ರವೇಶ ಪರೀಕ್ಷೆ ಇರುತ್ತದೆ ಎಂದು ತಿಳಿಸಿರುವ ನಾಗೇಂದ್ರ ಪ್ರಸಾದ್ ಹೆಚ್ಚಿನ ವಿವರಗಳಿಗೆ ೯೪೪೮೦೭೪೫೨೮ ಸಂಪರ್ಕಿಸುವAತೆ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಪ್ರಮುಖರಾದ ಸತ್ಯನಾರಾಯಣ, ಉದಯಕುಮಾರ್, ಅಶೋಕ್ ಕುಮಾರ್, ಲಕ್ಷಿö್ಮ, ಪ್ರತಿಭಾ, ಪ್ರವೀಣ್ ಇದ್ದರು.