ಮಡಿಕೇರಿ, ಜೂ. ೧೮: ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರು ಇಡುವುದು ಹಾಗೆಯೇ ಇಂದಿರಾ ಕ್ಯಾಂಟೀನ್ ಬಳಿ ಇರುವ ಬಸ್ ನಿಲ್ದಾಣದ ಉದ್ಯಾನವನದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ನಗರಸಭೆ ತೀರ್ಮಾನಿಸಲಾಗಿದೆ.

ಈ ಬಗ್ಗೆ ಸಲಹೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ, ೩೦ ದಿನದೊಳಗೆ ಸಕಾರಣ ಮತ್ತು ಸಂಬAಧಿತ ದಾಖಲೆಗಳೊಂದಿಗೆ ನಗರಸಭೆ ಕಚೇರಿಗೆ ಸಲ್ಲಿಸಲು ಕೋರಿದೆ. ಅವಧಿ ಮೀರಿ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ಅವರು ತಿಳಿಸಿದ್ದಾರೆ.