ಮಡಿಕೇರಿ, ಜೂ. ೧೯: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಣೆ ಮಾಡಿರುವುದನ್ನು ಖಂಡಿಸಿ ತಾ. ೨೦ರಂದು (ಇಂದು) ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಮಂಥರ್ ಗೌಡ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.