ಮಡಿಕೇರಿ, ಜೂ. ೧೮: ಮಂಗ ಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಜೂನ್, ೧೯ ಮತ್ತು ೨೦ ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ೭೪ನೇ ಪ್ರತಿಭೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ.
ಪ್ರತಿಭೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಜೂನ್, ೧೯ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಅಂತರಾಷ್ಟಿçÃಯ ರಗ್ಬಿ ಆಟಗಾರರಾದ ಮಾದಂಡ ಪಿ.ತಿಮ್ಮಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾದ ಬಿ.ಆರ್.ಸವಿತಾ ರೈ, ಪ್ರಾಂಶು ಪಾಲರಾದ ಮೇಜರ್ ಡಾ.ಬಿ.ರಾಘವ ಇತರರು ಪಾಲ್ಗೊಳ್ಳಲಿದ್ದಾರೆ.
೭೪ನೇ ಕಾಲೇಜು ವಾರ್ಷಿಕೋ ತ್ಸವದ ಉದ್ಘಾಟನೆಯು ಜೂನ್, ೨೦ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯ ಲಿದೆ. ಶಾಸಕರಾದ ಡಾ.ಮಂಥರ್ ಗೌಡ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ರೇಡಿ ಯೋಲಜಿಸ್ಟ್ ಡಾ.ಶ್ಯಾಮ್ ಅಪ್ಪಣ್ಣ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಸ್.ಅಶೋಕ್ ಆಲೂರ ಇತರರು ಪಾಲ್ಗೊಳ್ಳಲಿದ್ದಾರೆ.