ಮಡಿಕೇರಿ, ಜೂ. ೧೯ : ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರಕ್ಕೆ ಕುಡಿಯುವ ನೀರನ್ನು ಒದಗಿಸುತ್ತಿರುವ ಕೂಟುಹೊಳೆ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅಧ್ಯಕ್ಷರು ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೂಟುಹೊಳೆಯ ಮೋಟಾರ್ ದುರಸ್ತಿಯಾಗಿ ಸುಸ್ಥಿತಿಯಲ್ಲಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ನಗರದ ೨೩ ವಾರ್ಡ್ಗಳ ಬೀದಿದೀಪಗಳ ದುರಸ್ತಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿರುವ ಎಲ್ಲಾ ಸಾರ್ವಜನಿಕ ಬಸ್ ತಂಗುದಾಣ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಕಾರ್ಯ ಕೈಗೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಜನರು ಎಲ್ಲೆಂದರಲ್ಲಿ ಕಸ ಹಾಕದೆ ಕಸ ಸಂಗ್ರಹದ ವಾಹನಕ್ಕೆ ಹಾಕಿ ಸಹಕರಿಸುವಂತೆ ಅನಿತಾ ಪೂವಯ್ಯ ಮನವಿ ಮಾಡಿದರು.

ಕೂಟುಹೊಳೆಯ ಪಂಪ್ ಹೌಸ್ ನ ಸ್ಥಿತಿಗತಿ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದ ಹೈ ಮಸ್ಟ್ ದೀಪದ ದುರಸ್ತಿ ಕಾರ್ಯವನ್ನು ಪರಿಶೀಲಿಸಿದರು. ನಗರದ ಶೌಚಾಲಯ ಮತ್ತು ಬಸ್ ತಂಗುದಾಣಗಳನ್ನು ಶುಚಿಯಾಗಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.