ಉಪಚುನಾವಣೆ : ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್
ಬೆಂಗಳೂರು, ಜೂ. ೧೯: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್ ನೀಡಿದೆ. ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಜಗದೀಶ್ ಶೆಟ್ಟರ್ ಅವರಿಗೆ, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರಿಗೆ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಲಕ್ಷö್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ತಾ. ೨೦ ರಂದು (ಇಂದು) ಕೊನೆಯ ದಿನವಾಗಿದೆ. ತಾ. ೩೦ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.
ಕೇಂದ್ರೀಯ ಭಂಡಾರಗಳಿAದ ಅಕ್ಕಿ ಖರೀದಿಗೆ ಕ್ರಮ : ಮುಖ್ಯಮಂತ್ರಿ
ಬೆAಗಳೂರು, ಜೂ. ೧೯: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ‘ಅನ್ನಭಾಗ್ಯ ಯೋಜನೆ' ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್‌ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರದಿAದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಂತ್ರಿ, ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ ೩೪ ರೂ. ಅಕ್ಕಿ , ೨.೬೦ ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು ೩೬.೪೦ ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಎನ್.ಇ.ಪಿ. ರದ್ದು - ಎಸ್.ಇ.ಪಿ. ಜಾರಿ
ಕಲಬುರಗಿ, ಜೂ. ೧೯: ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟಿçÃಯ ಶಿಕ್ಷಣ ನೀತಿ(ಎನ್‌ಇಪಿ) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ(ಎಸ್‌ಇಪಿ) ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಸಿ ಸುಧಾಕರ್ ಅವರು, ಎನ್‌ಇಪಿ ಬದಲಾಯಿಸಿ, ಎಸ್‌ಇಪಿ ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್‌ಇಪಿ ಜಾರಿಗೊಳಿಸಲಾಗಿತ್ತು ಎಂದಿದ್ದಾರೆ. ರಾಜ್ಯದಲ್ಲಿ ಈಗ ೧೫ ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ೩೨ ವಿಶ್ವವಿದ್ಯಾಲಯಗಳಿವೆ. ಆಯವ್ಯಯದ ಶೇಕಡಾ ೬ ರಷ್ಟು ಅನುದಾನ ಶಿಕ್ಷಣ ಇಲಾಖೆಗೆ ನೀಡಬೇಕು ಎಂದು ಹೇಳಲಾಗುತ್ತದೆ. ಆದರೆ ಹಿಂದಿನ ಸರ್ಕಾರ ೫೪೦೦ ಕೋಟಿ ರೂ. ಮಾತ್ರ ನೀಡಿತ್ತು. ಇದು ಬಜೆಟ್‌ನ ಶೇಕಡಾ ೧.೭ ರಷ್ಟು ಅನುದಾನ ಮಾತ್ರ ಉನ್ನತ ಶಿಕ್ಷಣ ಇಲಾಖೆಗೆ ಬಂದಿದೆ ಎಂದರು.
ಈಜಿಪ್ಟ್ಟ್ಗೆ ಮೋದಿ ಭೇಟಿ
ನವದೆಹಲಿ, ಜೂ. ೧೯: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ, ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ ೧೧ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಮತ್ತು ಮೊದಲ ಮಹಾಯುದ್ಧದ ಸಮಯದಲ್ಲಿ ಈಜಿಪ್ಟ್ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಸೋಮವಾರ ಹೇಳಿದ್ದಾರೆ. ಪ್ರಧಾನಿಯವರ ಮುಂಬರುವ ಅಮೆರಿಕ ಮತ್ತು ಈಜಿಪ್ಟ್ ಭೇಟಿಯ ಕುರಿತು ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಅವರು, ಜೂನ್ ೨೪ ಮತ್ತು ೨೫ ರಂದು ಪ್ರಧಾನಿ ಮೋದಿ ಈಜಿಪ್ಟ್ಗೆ ಭೇಟಿ ನೀಡಲಿದ್ದಾರೆ ಎಂದರು. ಈಜಿಪ್ಟ್ಗೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ ಮತ್ತು ೧೯೯೭ ನಂತರ ಈಜಿಪ್ಟ್ಗೆ ಭಾರತೀಯ ಪ್ರಧಾನಿಯೊಬ್ಬರು ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಯಾಗಿದೆ ಎಂದು ಕ್ವಾತ್ರಾ ತಿಳಿಸಿದ್ದಾರೆ.
ಬಂದ್ ಕರೆ ನೀಡಿಲ್ಲ - ಸ್ಪಷ್ಟನೆ
ಬೆಂಗಳೂರು, ಜೂ. ೧೯: ವಿದ್ಯುತ್ ದರ ಏರಿಕೆ ವಿರೋಧಿಸಿ ತಾ. ೨೨ ರಂದು ಬಂದ್‌ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟಿçà (ಎಫ್ ಕೆಸಿಸಿಐ) ಅಧ್ಯಕ್ಷ ಬಿ. ವಿ. ಗೋಪಾಲರೆಡ್ಡಿ ಸ್ಪಷ್ಪಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಕರ್ನಾಟಕ ಬಂದ್ ಗೂ ಸಂಬAಧವಿಲ್ಲ, ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. ೯ ರಿಂದ ಶೇ.೩ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು. ವಿದ್ಯುತ್ ದರ ಇಳಿಕೆ ಮಾಡುವಂತೆ ಒತ್ತಾಯಿಸಿ ಎಫ್‌ಕೆಸಿಸಿಐ ತಾ. ೨೨ ರಂದು ಒಂದು ದಿನ ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು. ಆದರೆ, ಈಗ ನಾವು ಬಂದ್‌ಗೆ ಕರೆ ನೀಡಿಲ್ಲ ಎಂದು ಎಫ್‌ಕೆಸಿಸಿಐ ಅಧ್ಯಕ್ಷರು ತಿಳಿಸಿದ್ದಾರೆ.
ಸೇನೆ ಸೇರಿದ ಅಂಕೋಲಾದ ೧೭ ನಾಯಿಮರಿಗಳು!
ಅಂಕೋಲಾ, ಜೂ. ೧೯: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ನಿವಾಸಿ ರಾಘವೇಂದ್ರ ಭಟ್ ಎಂಬುವವರು ಸಾಕಿದ್ದ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ೧೭ ನಾಯಿಮರಿಗಳನ್ನು ಸೇನೆಗೆ ಸೇರ್ಪಡೆಯಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿರುವ ರಾಘವೇಂದ್ರ ಭಟ್ ಅವರು, ೨೫ ವರ್ಷಗಳಿಂದ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಿದ್ದಾರೆ. ರಾಘವೇಂದ್ರ ಭಟ್ ಅವರು ಮನೆಯಲ್ಲಿದ್ದ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ನಾಯಿ ಮರಿಗಳು ಸೇನೆಗೆ ಸೇರ್ಪಡೆಗೊಂಡಿವೆ. ಈ ನಾಯಿ ಮರಿಗಳನ್ನು ಸೇನೆಯ ಕಮಾಂಡೋ ಹಾಗೂ ಜವಾನರು ಎಸಿ ಬಸ್‌ನಲ್ಲಿ ಅಸ್ಸಾಂಗೆ ಕೊಂಡೊಯ್ದಿದ್ದಾರೆ.
ಡಿ.ಕೆ. ಸುರೇಶ್ ಹೇಳಿಕೆ ವೈರಾಗ್ಯದ್ದಲ್ಲ - ಡಿ.ಕೆ.ಶಿ.
ಬೆಂಗಳೂರು, ಜೂ. ೧೯: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು. ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.