ಶನಿವಾರಸಂತೆ, ಜೂ. ೨೦: ಸಮಾಜ ಸೇವೆಗೆ ಯುವ ಜನಾಂಗವನ್ನು ಸೇರ್ಪಡೆಗೊಳಿಸಿ, ಮುನ್ನಡೆಸುವ ಪ್ರಯತ್ನವೇ ರಾಷ್ಟಿçÃಯ ಸೇವಾ ಯೋಜನೆಯಾಗಿದೆ ಎಂದು ಸೋಮವಾರಪೇಟೆ ಬಿಟಿಸಿಜಿ ಕಾಲೇಜಿನ ಉಪನ್ಯಾಸಕ ಎಂ.ಎಸ್. ಸುನಿಲ್ ಹೇಳಿದರು.
ಸಮೀಪದ ಚಿಕ್ಕಕೊಳತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ೨೦೨೨-೨೩ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಜೊತೆಜೊತೆಯಲ್ಲಿ ವಿದ್ಯಾರ್ಥಿಗಳನ್ನು ಸಮಾಜಮುಖಿ ಕೆಲಸಕ್ಕೆ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನೆಯನ್ನು ಮಾಡಲಾಗಿದೆ. ಗಾಂಧೀಜಿಯವರ ಕನಸನ್ನು ನನಸು ಮಾಡಲು ಯುವ ಜನಾಂಗವನ್ನು ತೊಡಗಿಸಿಕೊಳ್ಳಲು ವಿವಿಧ ಸಮಿತಿಗಳು ನಡೆಸಿದ ಸಮ್ಮೇಳ ನಗಳು ಹಾಗೂ ದೇಶಮುಖ್, ಇತ್ಯಾದಿ ಸಮಿತಿಗಳು ಶಿಫಾರಸ್ಸು ಮಾಡಿದ್ದು ಪುಷ್ಟಿ ನೀಡಲು ಗಾಂಧೀಜಿಯವರ ಜನ್ಮ ಶತಾಬ್ಧಿಯಂದು ೧೯೬೯ ರಲ್ಲಿ ಕೇಂದ್ರ ಶಿಕ್ಷಣ ಮಂತ್ರಿ ವಿ.ಕೆ.ಆರ್. ರಾವ್ ಅವರು ಅಂದು ಚಾಲನೆ ನೀಡಿದ್ದರು ಎಂದು ಸ್ಮರಿಸಿದರು.
ವಿದ್ಯಾಸಂಸ್ಥೆ ನಿರ್ದೇಶಕ ಬಿ.ಟಿ. ರಂಗಸ್ವಾಮಿ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯ ಶಿಬಿರದಲ್ಲಿ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಪಾಲ್ಗೊಳ್ಳುವುದರಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆಯನ್ನು ಕಲಿತು ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ, ನಾಯಕರಾಗಿ ರೂಪುಗೊಳ್ಳುತ್ತಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಉಪಾಧ್ಯಕ್ಷ ಎಂ.ಯು. ಮಹಮ್ಮದ್ ಪಾಷ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟಿçÃಯ ಸೇವಾ ಯೋಜನೆಯಲ್ಲಿ ಪ್ರಾಮಾಣಿಕರಾಗಿ ತೊಡಗಿಸಿಕೊಂಡು ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಾಗ ಶಿಬಿರ ಯಶಸ್ವಿಯಾಗುತ್ತದೆ ಎಂದರು.
ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಈ.ಎಂ. ದಯಾನಂದ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಜೆ. ಅಶೋಕ್, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹೆಚ್.ಬಿ. ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮರಿಯಮ್ಮ, ಪತ್ರಕರ್ತ ಸುರೇಶ್ ಚೆರಿಯಮನೆ, ಉಪನ್ಯಾಸಕರಾದ ಎಸ್.ಎಸ್. ಮೋಹನ್ ಕುಮಾರ್, ಚಂದ್ರಕಾAತ್, ಚಂದ್ರಶೇಖರ್ ಮೂರ್ತಿ, ಪೊನ್ನಪ್ಪ ಉಪಸ್ಥಿತರಿದ್ದರು. ಯೋಜನಾಧಿಕಾರಿ ಎಂ.ಎನ್. ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹ ನಿರ್ದೇಶಕಿ ಟಿ.ಜೆ. ಶೋಭಾ ವಂದಿಸಿದರು.