ಮಡಿಕೇರಿ, ಜೂ. ೧೯: ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡAತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆಯು ತಾ. ೨೦, ೨೧ ಮತ್ತು ೨೨ ರಂದು ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.