ಮಡಿಕೇರಿ, ಜೂ. ೧೯: ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಪದವಿ ಪ್ರದಾನ ಸಮಾರಂಭವು ತಾ. ೨೦ ರಂದು (ಇಂದು) ಮಧ್ಯಾಹ್ನ ೨.೩೦ ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೊನ್ನಂಪೇಟೆ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ.ಸಿ.ಜಿ.ಕುಶಾಲಪ್ಪ, ಪೊನ್ನಂಪೇಟೆ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ಇತರರು ಪಾಲ್ಗೊಳ್ಳಲಿದ್ದಾರೆ.