ಮಡಿಕೇರಿ, ಜೂ. ೨೦: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೆ ಅನ್ನಭಾಗ್ಯ ಯೋಜನೆಯನ್ನು ವಿಫಲಗೊಳಿಸಲು ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ೧೦ ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಜುಲೈ ೧ ರಿಂದ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಈ ಸಂಬAಧ ಕೇಂದ್ರ ಆಹಾರ ನಿಗಮದೊಂದಿಗೆ ಪತ್ರ ವ್ಯವಹಾರ ನಡೆಸಿ, ಒಪ್ಪಿಗೆ ಪಡೆಯಲಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅನ್ನಭಾಗ್ಯ ಯೋಜನೆಯನ್ನು ವಿಫಲಗೊಳಿಸಲು ಮುಂದಾಗಿದೆ. ಇದು ಖಂಡನೀಯ ಎಂದು ಹೇಳಿದರು. ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಧರ್ಮಜ ಉತ್ತಪ್ಪ ನುಡಿದರು.
ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುAಡೇಗೌಡ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಿಪಂ ಮಾಜಿ ಸದಸ್ಯರುಗಳಾದ ಪಿ.ಎಂ.ಲತೀಫ್, ಪ್ರತ್ಯು, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಮಲ್ಲಪ್ಪ, ಉಪಾಧ್ಯಕ್ಷ ಮಂಡೀರ ಸದಾ ಮುದ್ದಪ್ಪ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.