ಮಡಿಕೇರಿ, ಜೂ. ೨೦: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ತಾ. ೨೨ ರಂದು ಬೆಳಿಗ್ಗೆ ೧೦.೩೦ ಯಿಂದ ಮಧ್ಯಾಹ್ನ ೩ ಗಂಟೆವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೆöÊವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್ ಬೆಂಗಳೂರು, ಎಸ್ಎಲ್ಎನ್ ಕಾಫಿ ಪ್ರೆöÊವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ.ಕ್ಕಿಂತ ಕಡಿಮೆ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕಚೇರಿಯನ್ನು ಖುದ್ದಾಗಿ ಅಥವಾ ದೂ. ೦೮೨೭೨-೨೨೫೮೫೧ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.