ಮಡಿಕೇರಿ, ಜೂ. ೨೦ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ೯ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯು “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ” ಎಂಬ ಘೋಷ ವ್ಯಾಕ್ಯದೊಂದಿಗೆ ತಾ. ೨೧ ರಂದು (ಇಂದು) ಬೆಳಿಗ್ಗೆ ೬.೩೦ ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ. ಮಂಥರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್‌ಸಿಂಹ, ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಬೋಜೇಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ. ರೇಣುಕಾದೇವಿ ಇತರರು ಪಾಲ್ಗೊಳ್ಳಲಿದ್ದಾರೆ.