ಸೋಮವಾರಪೇಟೆ, ಜೂ. ೨೦: ಸೋಮವಾರಪೇಟೆ ಕೃಷಿ ಇಲಾಖೆಯ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಅಣಬೆ ಬೇಸಾಯದ ತರಬೇತಿ ಕಾರ್ಯಾಗಾರ ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಶ್ಮಿ ಅವರು ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು, ಕೃಷಿ ಅಧಿಕಾರಿ ನವ್ಯ ನಾಣಯ್ಯ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್ ಇದ್ದರು.