ಮಡಿಕೇರಿ, ಜೂ. ೨೧ : ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯನ್ನು ತಾ. ೩೦ ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ. ೧ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೪೪,೫೦೦ ಆಗಿದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್‌ಎಟಿಎಸ್ ಐಡಿ (ಸ್ಯಾಟ್ಸ್ ಐಡಿ) ಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ ವಿಳಾಸ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ. ೯೮೪೪೫೩೧೦೪೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೧೭೭೨೧೪೩ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.