ಸಿದ್ದಾಪುರ , ಜೂ. ೨೧: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸಿದ್ದಾಪುರ ಸಮೀಪದ ಅಂಬೇಡ್ಕರ್ ನಿವಾಸಿ ಲೀನಾ (೪೫) ಮೃತ ದುರ್ದೈವಿ. ಬುಧವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಮನೆ ಸಮೀಪದ ಖಾಸಗಿ ತೋಟದಲ್ಲಿರುವ ಕೆರೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಗೆ ದಾಖಲಿಸಲಾಗಿದೆ.