vಮಡಿಕೇರಿ, ಜೂ. ೨೧: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯು ೨೦೨೨- ೨೩ ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣರಾದ ಶಿಕ್ಷಕ ವೃಂದದವರಿಗೆ ಸನ್ಮಾನ ಮಾಡಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ದಿವಾಕರ್ ಹೆಚ್.ಎಲ್, ದಲಿತ ಸಂಘರ್ಷ ಕಳೆದ ಒಂದು ದಶಕದಿಂದ ನಡೆಸಿದ ಸೇವೆ ಹಾಗೂ ವಿದ್ಯಾರ್ಥಿಗಳಿಗೆ, ಪೋಷಕರಿಗೆ ನೀಡಿದ ಸನ್ಮಾನದ ಉದ್ದೇಶ ಅವರು ಮತ್ತಷ್ಟು ಸಾಧನೆ ಮಾಡಲಿ ಎನ್ನುವುದು, ಸನ್ಮಾನದಿಂದ ಸ್ಪೂರ್ತಿ ಪಡೆಯುವ ಉಳಿದ ವಿದ್ಯಾರ್ಥಿಗಳು ತಾವೂ ಹೆಚ್ಚಿನ ಸಾಧನೆ ತೋರಲು ಪ್ರಯತ್ನಪಡುತ್ತಾರೆ. ವಿದ್ಯಾರ್ಥಿಗಳು ದೇಶದ ಶಕ್ತಿ ಅವರನ್ನು ಚಿಕ್ಕಂದಿನಿAದಲೇ ಜಾಗೃತಗೊಳಿಸ ಬೇಕಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪಂಚಾಯಿತಿ ಅಧ್ಯಕ್ಷ ರಮೇಶ್ ನಾವು ಉತ್ತಮವಾದ ನಾಗರೀಕರಾಗಿ ರುವುದನ್ನು ಮುಖ್ಯವಾದ ಗುರಿಯನ್ನಾಗಿಸಿಕೊಳ್ಳಬೇಕು. ಇದೇ ಮೊದಲ ಬಾರಿಗೆ ನಮ್ಮ ಶಾಲೆ ಸನ್ಮಾನಕ್ಕೆ ಭಾಜನರಾಗುತ್ತಿರುವುದು ನಮ್ಮ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತಿದೆ. ಈ ಸನ್ಮಾನ ಪಡೆದುಕೊಂಡು ಸಿಕ್ಕ ಗೌರವವನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ನುಡಿದರು.
ಮುಖ್ಯ ಅತಿಥಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್ ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಮುನ್ನಲೆಗೆ ತರುವಂತಹ ಶಿಕ್ಷಕರಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಹಾಗು ಮಕ್ಕಳಿಗೆ ಸನ್ಮಾನ ನೀಡುವುದು ನಿಜಕ್ಕೂ ಅಭಿನಂದನೀಯ ವೆಂದರು.ಅAಬೇಡ್ಕರ್ ಅವರು ಶಾಲೆಯ ಹೊರಭಾಗದಲ್ಲಿ ಕುಳಿತು ಓದಿ ನಮ್ಮನ್ನೆಲ್ಲಾ ಒಳಗೆ ಕುಳಿತು ಓದುವ ಹಾಗೆ ಕಾನೂನು ರೂಪಿಸಿದ್ದಾರೆ. ಅವರನ್ನು ಎಂದಿಗೂ ಮರೆಯುವಂತಿಲ್ಲ ಎಂದರು.
ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಅಂಬೇಡ್ಕರ್ ಅವರ ಮಹತ್ವವನ್ನು ಉದಾಹರಣೆಗಳ ಸಹಿತ ವಿವರಿಸುತ್ತಾ, ಡಾ.ಬಿ ಆರ್ ಅಂಬೇಡ್ಕರ್ ಅವರು ಯಾವ ರೀತಿ ಅಭ್ಯಾಸ ನಡೆಸುತ್ತಿದ್ದರು ಮತ್ತು ಆ ಶ್ರಮದಿಂದ ಅವರು ಗಳಿಸಿದ ಪದವಿಗಳು, ಸ್ಥಾನ, ಗೌರವದ ಅರಿವಿತ್ತರು. ವಿದ್ಯಾರ್ಥಿಗಳು ಯಾವ ಕಾರಣಕ್ಕೆ ತಮ್ಮ ಪಠ್ಯಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನು ಓದಬೇಕು ಹಾಗು ಈ ಓದು ಯಾವಾಗ ಅವರಿಗೆ ನೆರವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದರು.
ಶಾಲೆಯ ಮುಖ್ಯ ಶಿಕ್ಷಕರಾದ ಸೋಮಯ್ಯ ಮಾತನಾಡಿ ದ.ಸಂ.ಸಮಿತಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ನಡೆಸುತ್ತಿದ್ದ ಕಾರ್ಯಕ್ರಮವನ್ನು ಗಮನಿಸಿ ನಮಗೂ ಆ ಸೌಭಾಗ್ಯ ಸಿಗಬೇಕೆಂದು ಆಶಿಸುತ್ತಿದ್ದೆ. ಅದೇ ವರ್ಷ ಶಿರಂಗಾಲದಲ್ಲಿ ಸನ್ಮಾನವನ್ನು ಸ್ವೀಕರಿಸದನ್ನು ನೆನಪಿಸಿಕೊಳ್ಳುತ್ತಾ ಮುಂದಿನ ವರ್ಷದಿಂದ ಪ್ರತಿ ಬಾರಿ ಸನ್ಮಾನ ಸ್ವೀಕರಿಸುವ ಹಾಗೆ ವಿದ್ಯಾರ್ಥಿಗಳು ಓದಬೇಕೆಂದರು.
ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಜಾ, ಉಪಾಧ್ಯಕ್ಷ ಸಯ್ಯದ್ ಅಲಿ, ಶುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರು ಹಾಜರಿದ್ದರು.