ವೀರಾಜಪೇಟೆ, ಜೂ. ೨೦: ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗಡೆ ಅವರು ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ತುಪ್ಪ ನಾಣಿ ಭಗವತಿ ದೇವಾಲಯದ ಅಭಿವೃದ್ಧಿಗಾಗಿ ೨ ಲಕ್ಷ ರೂ.ಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಜನಜಾಗೃತಿ ಯೋಜನೆಯ ತಾಲೂಕು ಅಧ್ಯಕ್ಷ ಬಾನಂಗಡ ಅರುಣ್ ಹಾಗೂ ದೇವಾಲಯ ಸಮಿತಿ ಪದಾಧಿಕಾರಿಗಳೂ ಉಪಸ್ಥಿತರಿದ್ದರು.