ಕುಶಾಲನಗರ, ಜೂ. ೨೧: ಕುಶಾಲನಗರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಈರ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ದ್ದಾರೆ. ಸೋಮವಾರಪೇಟೆ ನಿವಾಸಿ ಅಶ್ರಫ್ (೪೦) ಮತ್ತು
ಕೊಟ್ಟಮುಡಿ ನಿವಾಸಿ ಇಸ್ಮಾಯಿಲ್ (೩೧) ಬಂಧಿತ ಆರೋಪಿಗಳು. ೧೯ ಗ್ರಾಂ ಎಂಡಿಎAಎ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಸಿಪಿಐ ಮಹೇಶ್ ಮಾರ್ಗದರ್ಶನದಲ್ಲಿ ಕುಶಾಲನಗರ ಪಟ್ಟಣ ಠಾಣೆಯ ಪಿಎಸ್ಐ ರವೀಂದ್ರ ಮತ್ತು ಸಿಬ್ಬಂದಿಗಳ ವಿಶೇಷ ತಂಡ ಆರೋಪಿಗಳನ್ನು ಕುಶಾಲನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಪತ್ತೆ ಹಚ್ಚಿದ್ದು, ಕೃತ್ಯಕ್ಕೆ ಬಳಸಿದ ಒಂದು ಜೀಪ್ ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಜಯಪ್ರಕಾಶ್, ರಂಜಿತ್, ಗಣೇಶ್ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಅಕ್ರಮ ಮಾದಕ ವಸ್ತುಗಳ ಮಾರಾಟ ಬಗ್ಗೆ ಮಾಹಿತಿ ಲಭಿಸಿದಲ್ಲಿ ತಕ್ಷಣ ಸ್ಥಳೀಯ ಪೊಲೀಸರಿಗೆ ಸುಳಿವು ನೀಡುವಂತೆ ಪೊಲೀಸ್ ಅಧಿಕಾರಿಗಳು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.