ಮಡಿಕೇರಿ, ಜೂ. ೨೨: ತಾಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ ೨೦೨೪-೨೫ ನೇ ಸಾಲಿಗೆ ೬ ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ ೫ ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೦ ಕೊನೆಯ ದಿನವಾಗಿದೆ. ಅರ್ಜಿಯನ್ನು hಣಣಠಿs://ಟಿಚಿvoಜಚಿಥಿಚಿ.gov.iಟಿ ಮತ್ತು hಣಣಠಿs://ಛಿbseiಣms.ಡಿಛಿiಟ.gov.iಟಿ/ಟಿvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿ ರಬೇಕು. ೨೦೨೩-೨೪ ರ ಶೈಕ್ಷಣಿಕ ಅವಧಿಯಲ್ಲಿ ೫ ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು ೦೧-೦೫-೨೦೧೨ ರಿಂದ ೩೧-೦೭-೨೦೧೪ ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲ ಪಂಕಜಾಕ್ಷನ್ ತಿಳಿಸಿದ್ದಾರೆ.