ಮಡಿಕೇರಿ, ಜೂ. ೨೨: ಮಂಗಳೂರು ಹೆದ್ದಾರಿಯ ನಡುವಿನ ಸಂಪಾಜೆ ಸಮೀಪದ ದೇವರಕೊಲ್ಲಿ ಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಕಂಟೈನರ್ ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ನಾಲ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ರವಿಕಿರಣ್ (೨೬) ಮೃತ ದುರ್ಧೈವಿ. ಉಳಿದಂತೆ ಕಾರು ಚಲಾಯಿಸುತ್ತಿದ್ದ ಚಂದ್ರಶೇಖರ್, ಜೊತೆಗಿದ್ದ ಹರ್ಷ, ಜಗದೀಶ್ ಹಾಗೂ ಕಂಟೈನರ್ ಚಾಲಕ ಈಶ್ವರ ಗಂಭೀರ ಗಾಯಗಳಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಮೂಲದ ನಾಲ್ವರು ಸ್ನೇಹಿತರು ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳಿ ದರ್ಶನ ಮುಗಿಸಿ ಸಂಪಾಜೆ ಜೊತೆಗಿದ್ದ ಹರ್ಷ, ಜಗದೀಶ್ ಹಾಗೂ ಕಂಟೈನರ್ ಚಾಲಕ ಈಶ್ವರ ಗಂಭೀರ ಗಾಯಗಳಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಮೂಲದ ನಾಲ್ವರು ಸ್ನೇಹಿತರು ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳಿ ದರ್ಶನ ಮುಗಿಸಿ ಸಂಪಾಜೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಸ್ವಿಫ್ಟ್ ಕಾರು ಹಾಗೂ ಕುಶಾಲನಗರದಿಂದ ಕಾಫಿ ತುಂಬಿ ಮಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಧವಾರ ರಾತ್ರಿ ಮುಖಾಮುಖಿ ಅಪಘಾತ ಸಂಭವಿಸಿದೆ. ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಂಟೈನರ್ ಚಾಲಕನ ಅಜಾಗರೂಕತೆಯ ಚಾಲನೆ ದುರ್ಘಟನೆಗೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇವರಕೊಲ್ಲಿ ತಿರುವಿನಲ್ಲಿ ಬಲ ಬದಿಗೆ ಲಾರಿ ತಿರುಗಿದ ಹಿನ್ನೆಲೆ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ರಸ್ತೆಬದಿಯ ತಡೆಗೋಡೆಗೂ ಹೊಡೆದ ಪರಿಣಾಮ ಲಾರಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ಸಂದರ್ಭ ಕಾರು ಜಖಂಗೊAಡು ಒಳಗಿದ್ದವರು ಗಾಯಗೊಂಡು ಹೊರಬರಲಾಗದೆ ಸಿಲುಕಿಕೊಂಡಿದ್ದಾರೆ. ಅವರುಗಳನ್ನು ಸ್ಥಳೀಯರು ಹೊರತೆಗೆದು ಸುಳ್ಯದ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ತಲೆ ಸೇರಿದಂತೆ ದೇಹದ ನಾನಾ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ರವಿಕಿರಣ್ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಅಪಘಾತವಾಗಿ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಈಶ್ವರ ಕೂಡ ಗಂಭೀರ ಸ್ಥಿತಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಎರಡು ವಾಹನಗಳು ನಜ್ಜುಗುಜ್ಜಾಗಿವೆ. ಕಾರಿನಲ್ಲಿದ್ದವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಂಬAಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.