ವಿದ್ಯುತ್ ದರ ಏರಿಕೆ: ಸರ್ಕಾರದೊಂದಿಗೆ ಸಹಕರಿಸಲು ಮನವಿ

ಬೆಂಗಳೂರು, ಜೂ. ೨೨: ವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು. ವಿದ್ಯುತ್ ಏರಿಕೆಯಿಂದ ರಾಜ್ಯದ ಕೈಗಾರಿಕೋದ್ಯಮಿಗಳು ಬಂದ್ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆಯು ಸ್ವತಂತ್ರ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿರ್ಧಾರವಾಗಿದೆ ಮತ್ತು ಸರ್ಕಾರದ ನಿರ್ಧಾರಕ್ಕೂ ಇದಕ್ಕೂ ಯಾವುದೇ ಸಂಬAಧವಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಬಿಜೆಪಿ ಅಧಿಕಾರಾವಧಿಯಲ್ಲಿ ವಿದ್ಯುತ್ ದರ ಏರಿಕೆ ನಿರ್ಧಾರವಾಗಿತ್ತು ಎಂದು ಸ್ಪಷ್ಟಪಡಿಸಿದರು. ಇತ್ತೀಚೆಗಷ್ಟೇ ವಿದ್ಯುತ್ ದರ ಏರಿಕೆ ಮಾಡಿರುವ ಬಗ್ಗೆ ಕೈಗಾರಿಕಾ ಸಂಸ್ಥೆಗಳು ವ್ಯಕ್ತಪಡಿಸಿರುವ ಆತಂಕದ ಕುರಿತು ಕೇಳಿದಾಗ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಚರ್ಚಿಸಲಾಗುವುದು ಎಂದರು. ಜುಲೈ ಮೊದಲ ವಾರದಲ್ಲಿ ನವದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಚರ್ಚಿಸುವುದಾಗಿ ತಿಳಿಸಿದರು. ಜುಲೈ ೨೭ ರೊಳಗೆ ಮಾರ್ಗಸೂಚಿ ಸಿದ್ಧವಾಗಲಿದೆ ಮತ್ತು ನಂತರ ನಾನು ವಿವಿಧ ಕೈಗಾರಿಕಾ ಯೋಜನೆಗಳು ಮತ್ತು ಪ್ರಸ್ತಾವಿತ ಉಪಕ್ರಮಗಳ ಕುರಿತು ಚರ್ಚಿಸಲು ಸಂಬAಧಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಅವರು ಹೇಳಿದರು.

ಲೈಂಗಿಕ ಕಿರುಕುಳ ಪ್ರಕರಣ : ನ್ಯಾಯಾಲಯಕ್ಕೆ ವರ್ಗಾವಣೆ

ನವದೆಹಲಿ, ಜೂ. ೨೨: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟೆçÃಟ್(ಸಿಎಂಎA) ಗುರುವಾರ ಸಿಟಿ ಕೋರ್ಟ್ಗೆ ವರ್ಗಾಯಿಸಿದ್ದಾರೆ. ಸಿಎಮ್‌ಎಂ ಮಹಿಮಾ ರಾಯ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳಕ್ಕೆ ಸಂಬAಧಿಸಿದ ಪ್ರಕರಣವನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟೆçÃಟ್(ಎಸಿಎಂಎA) ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ವಹಿಸಿದ್ದಾರೆ. ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸುತ್ತಾರೆ. ಪ್ರಕರಣದ ವಿಚಾರಣೆಯನ್ನು ಈಗ ಜೂನ್ ೨೭ಕ್ಕೆ ಪಟ್ಟಿ ಮಾಡಲಾಗಿದೆ. ಕಳೆದ ವಾರ, ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಮತ್ತು ಮಾಜಿ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ೧,೦೦೦ ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

೩,೫೦೦ ಪೊಲೀಸರ ನೇಮಕಕ್ಕೆ ಇನ್ನೊಂದು ವಾರದಲ್ಲಿ ಆದೇಶ

ತುಮಕೂರು, ಜೂ. ೨೨: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು ೧೫ ಸಾವಿರ ಪೊಲೀಸರ ಹುದ್ದೆ ಖಾಲಿ ಇದ್ದು, ಇನ್ನೊಂದು ವಾರದಲ್ಲಿ ೩,೫೦೦ ಪೊಲೀಸರ ನೇಮಕಕ್ಕೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುರುವಾರ ತಿಳಿಸಿದ್ದಾರೆ.ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಇನ್ನು ಸ್ಮಾರ್ಟ್ಸಿಟಿ ಯೋಜನೆಯಡಿ ತುಮಕೂರಿಗೆ ೧ ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಕೇಂದ್ರದಿAದ ಶೇ. ೫೦, ರಾಜ್ಯ ಸರ್ಕಾರದಿಂದ ಶೇ. ೫೦ ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ. ೪೫ ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ರೂ. ೪೪೩ ಕೋಟಿ ಅನುದಾನ ಮಂಜೂರು ಮಾಡಿದೆ ಎಂದರು. ಸ್ಮಾರ್ಟ್ಸಿಟಿ ಯೋಜನೆಯಡಿ ೧೭೦ ಕಾಮಗಾರಿ ನಡೆಯುತ್ತಿವೆ. ನವೆಂಬರ್‌ನೊಳಗೆ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್: ಖಾಸಗಿ ವಾಹನ ನಿಷೇಧ

ಮೈಸೂರು, ಜೂ. ೨೨: ಆಷಾಢಮಾಸದ ಪ್ರತಿ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಲಲಿತಮಹಲ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಸೇವೆ ದೊರೆಯಲಿದೆ ಎಂದು ಅವರು ಹೇಳಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಬೆಟ್ಟಕ್ಕೆ ಬರುವ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಿ ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆ ಮಾಡಿರುವ ಬಸ್‌ಗಳಲ್ಲಿ ದೇವಸ್ಥಾನಕ್ಕೆ ತೆರಳಬಹುದು. ಬೆಳಗಿನ ಜಾವ ೩ ಗಂಟೆಯಿAದ ರಾತ್ರಿ ೧೦ ರವರೆಗೆ ಬಸ್ ಸೌಲಭ್ಯ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ದೇವರ ದರ್ಶನಕ್ಕೆ ರೂ. ೩೦೦ ಮತ್ತು ೫೦ ಟಿಕೆಟ್ ವಿತರಣೆ ಮಾಡಲಾಗುವುದು ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ಆಷಾಢಮಾಸ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೆಟ್ಟಿಲು, ದೇವಸ್ಥಾನ ಸುತ್ತಮುತ್ತ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡುವವರಿಗೆ ಪ್ರಮಾಣಪತ್ರ ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿ ಬಳಿಯಿಂದ ಪ್ರಮಾಣಪತ್ರ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.