ಮಡಿಕೇರಿ, ಜೂ. ೨೨: ೯ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧೆಡೆ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಲಾಯಿತು. ಸಂಘ-ಸAಸ್ಥೆ, ಶಾಲಾ-ಕಾಲೇಜುಗಳಲ್ಲಿ ಯೋಗ ಮಾಡಿ ಸಾರ್ವಜನಿಕರು, ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಯೋಗ ದಿನಾಚರಣೆಯನ್ನು ಆಚರಿಸಿದರು.

ಮಡಿಕೇರಿ: ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯನ್ನು ಪಡೆದುಕೊಳ್ಳಬಹುದು. ಆ ಮೂಲಕ ಶಿಸ್ತುಬದ್ಧ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ತರವಾದ ಸ್ಥಾನವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇ. ಪ್ರೊ. ಬಿ. ರಾಘವ ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ (ಡಿಪ್ಲೊಮ) ಯೋಗ ವಿಜ್ಞಾನ ವಿಭಾಗ, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಕರ್ನಾಟಕ ೧೯ನೇ ಬೆಟಾಲಿಯನ್‌ನ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ವಿ.ಡಿ. ಮತ್ತು ಮಡಿಕೇರಿಯ ಕೆನರಾ ಬ್ಯಾಂಕ್ ಪಶ್ಚಿಮ ಶಾಖೆಯ ವ್ಯವಸ್ಥಾಪಕ ಪಿ.ಕೆ. ಅವಿನಾಶ್ ಅವರು ಆಗಮಿಸಿದ್ದರು.

ಪ್ರಾಯೋಗಿಕ ಯೋಗಾಭ್ಯಾಸದಲ್ಲಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜಕಿ ಡಾ. ಗಾಯತ್ರಿ ಉಪಸ್ಥಿತರಿದ್ದರು. ಪ್ರಾಣಿಶಾಸ್ತç ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ (ಡಿಪ್ಲೊಮ) ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಎಂ.ಪಿ. ಕೃಷ್ಣ ಅವರು ಇತರರು ಇದ್ದರು.ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜು ಮತ್ತು ಎನ್.ಎಸ್.ಎಸ್. ಘಟಕದ ಸಹಭಾಗಿತ್ವ ದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಭಾಂಗಣದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಸಮೂಹ ಯೋಗ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯ ಕ್ರಮವನ್ನು ಅಂರ‍್ರಾಷ್ಟಿçÃಯ ಯೋಗ ಶಿಕ್ಷಕಿ ಹನ್ಸಾ ಜೀವನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯ ಎಂದರೆ ಶಾರೀರಿಕ ಆರೋಗ್ಯ ಮಾತ್ರ ಎಂದುಕೊಳ್ಳಲಾಗುತ್ತದೆ. ಆದರೆ ಆರೋಗ್ಯದಲ್ಲಿ ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವು ಮುಖ್ಯವಾಗುತ್ತದೆ. ಈ ಎರಡು ಬಗೆಯ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ತುಂಬಾ ಸಹಕಾರಿಯಾಗಿದೆ ಎಂದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆ ವ್ಯವಸ್ಥಾಪಕ ರೆವರೆಂಡ್ ಫಾದರ್ ಐಸಾಕ್ ರತ್ನಾಕರ್ ಮಾತನಾಡಿ, ಈ ಬಾರಿಯ ಯೋಗದ ಘೋಷವಾಕ್ಯ ವಸುದೈವ ಕುಟುಂಬಕA ಅಂದರೇ ಇಡೀ ವಿಶ್ವವೇ ಒಂದು ಕುಟುಂಬ ಎನ್ನುವ ಪರಿಕಲ್ಪನೆ. ನಾವೆಲ್ಲರೂ ಸೇರಿ ಉತ್ತಮ ಆರೋಗ್ಯವನ್ನು ಯೋಗದ ಮೂಲಕ ಪಡೆದುಕೊಂಡು ಆರೋಗ್ಯ ವಂತ ಸಮಾಜ ನಿರ್ಮಿಸಬೇಕಿದೆ ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಎನ್.ಎಸ್.ಎಸ್. ಯೋಜನಾಧಿಕಾರಿ ಅರ್ಜುನ್ ಮಾತನಾಡಿದರು. ಸಭಾ ಕಾರ್ಯಕ್ರಮದ ಬಳಿಕ ಸುಮಾರು ಒಂದು ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಅಂತ ರ‍್ರಾಷ್ಟಿçÃಯ ಯೋಗ ಶಿಕ್ಷಕಿ ಹನ್ಸಾ ಜೀವನ್ ಹಲವು ಸರಳ ಆಸನಗಳು, ಉಸಿರಾಟದ ಕ್ರಮಗಳು, ಸೂರ್ಯ ನಮಸ್ಕಾರ, ಧ್ಯಾನ ಮಾಡಿಸಿದರು. ವೇದಿಕೆಯಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಮುಖ್ಯಸ್ಥೆ ಹೇಮಾ ಬಿ.ಡಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.ಕುಶಾಲನಗರ: ೯ನೆಯ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಕುಶಾಲನಗರದ ವಿವಿಧೆÀಡೆ ಸಂಘ-ಸAಸ್ಥೆಗಳ ಆಶ್ರಯದಲ್ಲಿ ಯೋಗ ಕಾರ್ಯಕ್ರಮಗಳು ನಡೆದವು.

ಯೋಗ ಮಾರ್ಗ ಕುಶಾಲನಗರ, ಭಾರತ ಸ್ವಾಭಿಮಾನ ಟ್ರಸ್ಟ್, ಪತಂಜಲಿ ಯೋಗ ಸಮಿತಿ ಮತ್ತು ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಕರಾಟೆ ಅಂಡ್ ಯೋಗ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದ ರೈತ ಸಹಕಾರ ಭವನ ಸಭಾಂಗಣದಲ್ಲಿ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.

ಯೋಗ ಶಿಕ್ಷಕಿ ಅಮಿತಾ ಸತೀಶ್ ಅವರು ದೀಪ ಪ್ರಜ್ವಲನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯೋಗಪಟು ಉದಯ ಪ್ರಕಾಶ್ ಅವರು ಯೋಗಭ್ಯಾಸ ನಡೆಸಿಕೊಟ್ಟರು.

೨೦ ರೀತಿಯ ಯೋಗ ಆಸನಗಳು ಹಾಗೂ ಪ್ರಾಣಾಯಾಮ ಅಭ್ಯಾಸಗಳಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರು ಯೋಗ ತರಬೇತಿಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದರು.

ಯೋಗ ಶಿಕ್ಷಕರಾದ ಮಧುಸೂದನ್, ಸಾಕೇತ್, ಮಮತಾ ಮತ್ತು ಅಮೃತರಾಜ್ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸಗಳು ನಡೆದವು.ಮಡಿಕೇರಿ: ಸ್ಥಳೀಯ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ ಯೋಗ ಗುರು ಸಂಕೇತ್ ಅವರ ಮಾರ್ಗದರ್ಶನದಲ್ಲಿ ಯೋಗ ದಿನವನ್ನು ಆಚರಿಸಲಾಯಿತು.

ಸಂಸ್ಥೆಯ ವ್ಯವಸ್ಥಾಪಕ ಗುರು ನವೀನ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗಿರಬಾರದು, ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಸ್ಥಿರತೆ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.