ಕುಶಾಲನಗರ, ಜೂ. ೨೨: ಕುಶಾಲನಗರದ ನಿವಾಸಿ ಯೊಬ್ಬ ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಕುಶಾಲನಗರ ಪಟ್ಟಣದ ಚಿಕ್ಕಣ್ಣ ಬಡಾವಣೆಯ ನಿವಾಸಿ ಗಂಗಾಧರ (೭೨) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಶಾಲನಗರ ಕೊಪ್ಪ ಹಳೆಯ ಸೇತುವೆ ಕೆಳಭಾಗದಲ್ಲಿ ನದಿ ಬಂಡೆ ಮೇಲೆ ರಕ್ತ ಸಿಕ್ತ ಮೃತ ದೇಹವನ್ನು ಕಂಡ ಸ್ಥಳೀಯರು ಕುಶಾಲನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾಧಿಕಾರಿ ರವೀಂದ್ರ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿದರು. ಕುಶಾಲನಗರದಲ್ಲಿ ಲಾರಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಂಗಾಧರ ಅವರು ತನ್ನ ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತ ಗಂಗಾಧರ ಅವರು ಮುಂಜಾನೆ ೩.೩೦ರ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಗಾಧರ್ ಸೇತುವೆಯಲ್ಲಿ ತೆರಳಿದ ದೃಶ್ಯ ಸಿಸಿ ಕ್ಯಾಮರಾ ದಲ್ಲಿ ಕಂಡು ಬಂದಿದೆ. ಮೃತ ವ್ಯಕ್ತಿ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.