ಬೆಂಗಳೂರು, ಜೂ. ೨೨: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರವರ್ಗ 'ಎ' ಮತ್ತು 'ಬಿ' ದೇವಾಲಯಗಳಲ್ಲಿ ೬೫ ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ದೇವರ ನೇರ ದರ್ಶನಕ್ಕೆ ಅವಕಾಶ ನೀಡುವಂತೆ ಇಲಾಖೆ ಆದೇಶ ಹೊರಡಿಸಿದೆ.

ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತು ಕಾಯಲು ಕಷ್ಟವಾಗುವುದರಿಂದ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಾಲಯಗಳಲ್ಲಿ ಆಧಾರ್ ಕಾರ್ಡ್ ನೀಡಿದ್ದಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಲಯಗಳಿಗೂ ಇಲಾಖೆ ಸೂಚಿಸಿದೆ ಹಾಗೂ ದೇವಾಲಯಗಳಲ್ಲಿ ಸ್ಥಳಾವಕಾಶವಿದ್ದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಜಾಗ ಕಾಯ್ದಿರಿಸಲು ಸಹ ಸೂಚಿಸಲಾಗಿದೆ.

ದೇವಾಲಯಗಳಲ್ಲಿ ಹಿರಿಯ ನಾಗರಿಕರ ಕೇಂದ್ರವನ್ನು ಸ್ಥಾಪಿಸಿ ಹಿರಿಯ ನಾಗರಿಕರಿಗೆ ಸಹಕರಿಸುವಂತೆಯೂ ಸೂಚಿಸಲಾಗಿದೆ.