ಕುಶಾಲನಗರ, ಜೂ. ೨೩: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ - ೨೦೨೩ ಪ್ರಶಸ್ತಿಗೆ ಕುಶಾಲನಗರದ ಶಾಂತ ಶ್ರೀಪತಿ ಆಯ್ಕೆಯಾಗಿದ್ದಾರೆ.

ಕುಶಾಲನಗರದಲ್ಲಿ ಶಾರದಾ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಲವು ವರ್ಷಗಳ ಸಾಧನೆ ಮೂಲಕ ರಾಷ್ಟಿçÃಯ ಪ್ರಶಸ್ತಿಗಳಿಗೆ ಭಾಜನರಾಗಿರುವ ಶಾಂತ ಶ್ರೀಪತಿ ಅವರನ್ನು ತಾ. ೨೫ ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಪರಿಷತ್ತಿನ ರಾಜ್ಯ ಸಮ್ಮೇಳನದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್. ಕಿರಣ್‌ಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್ ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.