ಕೂಡಿಗೆ, ಜೂ. ೨೩: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳ ಪ್ರಮುಖರ ಸಮ್ಮುಖದಲ್ಲಿ ಡಿವೈಎಸ್ಪಿ ಗಂಗಾಧರಪ್ಪ ನವರ ಅಧ್ಯಕ್ಷತೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಆಚರಣೆ ಮಾಡುವ ಬಕ್ರೀದ್ ಹಬ್ಬದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯನ್ನು ಕಾಪಾಡುವಂತೆ, ಪೊಲೀಸ್ ಇಲಾಖೆಯ ನಿಯಮಗಳನ್ನು ಪಾಲನೆ ಮಾಡುವಂತೆ ತಿಳಿಸಿದರು.
ಈ ಸಂದರ್ಭ ಕುಶಾಲನಗರ ವೃತ್ತ ನಿರೀಕ್ಷಕರಾದ ಮಹೇಶ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಸೇರಿದಂತೆ ವಿವಿಧ ಗ್ರಾಮಗಳ ಪ್ರಮುಖರು ಭಾಗವಹಿಸಿದ್ದರು.