ವೀರಾಜಪೇಟೆ, ಜೂ. ೨೩: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಅವರ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಪ್ರಬಾರ ವೈದ್ಯಾಧಿಕಾರಿಯಾಗಿ ತಜ್ಞವೈದ್ಯರಾದ ಡಾ. ಹೇಮಪ್ರಿಯ ಅವರನ್ನು ನೇಮಕಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶಿಸಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಪೊನ್ನಣ್ಣ ಅವರಿಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಬದಲಾವಣೆಗೆ ಎ.ಎಸ್.ಪೊನ್ನಣ್ಣ ಸೂಚಿಸಿದ್ದರು.