ಮಡಿಕೇರಿ, ಜೂ. ೨೩: ೯ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧೆಡೆ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಲಾಯಿತು. ಸಂಘ-ಸAಸ್ಥೆ, ಶಾಲಾ-ಕಾಲೇಜುಗಳಲ್ಲಿ ಯೋಗ ಮಾಡಿ ಸಾರ್ವಜನಿಕರು, ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಯೋಗ ದಿನಾಚರಣೆಯನ್ನು ಆಚರಿಸಿದರು.

ಜಿಲ್ಲೆಯ ವಿವಿಧೆಡೆ ಯೋಗ ದಿನಾಚರಣೆ

ಮಡಿಕೇರಿ, ಜೂ. ೨೩: ೯ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧೆಡೆ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಲಾಯಿತು. ಸಂಘ-ಸAಸ್ಥೆ, ಶಾಲಾ-ಕಾಲೇಜುಗಳಲ್ಲಿ ಯೋಗ ಮಾಡಿ ಸಾರ್ವಜನಿಕರು, ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಯೋಗ ದಿನಾಚರಣೆಯನ್ನು ಆಚರಿಸಿದರು.ಪೊನ್ನಂಪೇಟೆ: ಪೊನ್ನಂಪೇಟೆ ಕ್ಲಸ್ಟರ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಗೆ ಎಸ್‌ಡಿಎಂಸಿ ಅಧ್ಯಕ್ಷ ಜುನೈದ್ ಚಾಲನೆ ನೀಡಿದರು.

ನಂತರ ಮಾತನಾಡಿ ಮನೆಯಲ್ಲಿ ಪ್ರತಿದಿನ ಯೋಗಾಸನ ಮಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ತಿಳಿಸಿದರು. ಈ ಸಂದರ್ಭ ದೈಹಿಕ ಶಿಕ್ಷಕರ ಮಹೇಶ್ ವಿವಿಧ ರೀತಿಯ ದೈಹಿಕ ವ್ಯಾಯಾಮ ಮಾಡಿಸಿ, ಯೋಗದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಗ್ರಾ.ಪಂ. ಸದಸ್ಯರಾದ ರಾಮಕೃಷ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಎಸ್‌ಡಿಎಂಸಿ ಸದಸ್ಯರು, ಪೋಷಕರು ಶಿಕ್ಷಕರಾದ ಫಿಲೋಮಿನ, ಜಾನ್ಸಿ, ರೋಸಿ, ಶಕೀಲಾ ಬಾನು, ಮಂಗಳಾAಗಿ, ಗಂಗಾಮಣಿ, ನಿಂಗರಾಜು, ವಿನಿತ, ಅಜಿತ, ಸುನೀತ, ಸುದೀಕ್ಷಾ, ಚಂದ್ರಮತಿ, ಮಂಜುಳ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು ಹಾಜರಿದ್ದರು.ಸೋಮವಾರಪೇಟೆ: ಇಲ್ಲಿನ ನಿರಂತರ ಯೋಗ ಕೇಂದ್ರದ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನವನ್ನು ಆಚರಿಸಲಾಯಿತು.ಯೋಗ ಕೇಂದ್ರದ ಶಿಕ್ಷಕರುಗಳಾದ ಕಿಬ್ಬೆಟ್ಟ ಗಣೇಶ್, ಪ್ರಶಾಂತ್ ಅವರುಗಳು ಸಾರ್ವಜನಿಕರಿಗೆ ಯೋಗದ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ನೀಡಿದರು. ಯೋಗ ಕರ್ಮಸ್ಯ ಕೌಸಲ ತಂಡದ ಸದಸ್ಯರು, ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪೊನ್ನಂಪೇಟೆ: ದೇಹ ಮತ್ತು ಮನಸ್ಸನ್ನು ಬಿಡಿಸಿ ಉತ್ತಮ ಆಲೋಚನೆಯನ್ನು ಬೆಳೆಸುವ ಯೋಗ ಮಾನವನನ್ನು ವಿಶ್ವಮಾನವ ನನ್ನಾಗಿಸುತ್ತದೆ ಎಂದು ಪಾಲಿಬೆಟ್ಟ ಸರ್ಕಾರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕಿಯಾದ ಮೀರಾ ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮೀರಾ ಅಶೋಕ್ ಅವರು ವಿದ್ಯಾರ್ಥಿಗಳಿಗೆ ತಡಾಸನ, ವೃಕ್ಷಾಸನ, ತ್ರಿಕೋನಾಸನ, ಸಖಾಸನ, ಬದಕೋನಾಸನ, ಶಶಾಂಕಾಸನವನ್ನು ಹೇಳಿಕೊಟ್ಟು ಪ್ರತಿನಿತ್ಯ ಯೋಗವನ್ನು ಅಭ್ಯಾಸ ಮಾಡುವುದರಿಂದ ಪ್ರತಿಯೊಬ್ಬ ವ್ಯಕ್ತಿಯು ರೋಗ ಮುಕ್ತವಾಗಿ ಆರೋಗ್ಯವಂತ ನಾಗಿರುತ್ತಾನೆ. ಯೋಗವು ವ್ಯಕ್ತಿಯಲ್ಲಿ ವಿಶಾಲವಾದ ಆಲೋಚನೆಯನ್ನು ಬೆಳೆಸುತ್ತದೆ ಎಂಬ ಮಾಹಿತಿಯನ್ನು ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಶೈನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ರಿಘಾ, ಸರಿನ್ಮ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕ ಪಿ.ಆರ್. ಶಿವದಾಸ್ ಸ್ವಾಗತಿಸಿ, ಕೀರ್ತನಾ ವಂದಿಸಿ, ಸುನಿತ ನಿರೂಪಿಸಿದರು.ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳಲ್ಲಿ ೯ನೇ ಅಂರ‍್ರಾಷ್ಟಿçÃಯ ಯೋಗ ದಿನವನ್ನು ಆಚರಿಸಲಾಯಿತು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂರ‍್ರಾಷ್ಟಿçÃÃಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಮಾತನಾಡಿ, ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯನ್ನು ಪಡೆದುಕೊಳ್ಳಬಹುದು. ಪ್ರತಿದಿನ ಯೋಗ ಮಾಡುವುದರಿಂದ ಓದಿನ ಗಮನಕೊಡಲು ಸಾಧ್ಯ. ದೈಹಿಕ ಹಾಗೂ ಮಾನಸಿಕ ಸದೃಢತೆ ಹೊಂದಲು ಯೋಗ ಸಹಕಾರಿ ಎಂದರು.

ಈ ಸಂದರ್ಭ ಕಾಲೇಜಿನ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಗೋಣಿಕೊಪ್ಪ ವರದಿ: ಇಲ್ಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳು ಯೋಗಾಭ್ಯಾಸ ನಡೆಸಿದರು. ಸ್ಥಳೀಯ ಗ್ರಾ.ಪಂ. ಸದಸ್ಯ ಕುಲ್ಲಚಂಡ ಪ್ರಮೋದ್ ಗಣಪತಿ ದೀಪ ಬೆಳಗಿಸಿ ಉದ್ಘಾಟಿಸಿ, ಯೋಗ ಅಭ್ಯಾಸ ಜೀವನಕ್ಕೆ ಹೆಚ್ಚು ಮುಖ್ಯವಾಗಿದ್ದು, ನಿರಂತರ ಅಭ್ಯಾಸ ಮುಖ್ಯ ಎಂದು ಸಲಹೆ ನೀಡಿದರು.

ದೈಹಿಕ ಶಿಕ್ಷಕ ತಿರುನೆಲ್ಲಿಮಾಡ ರಮಾನಂದ, ಚಿತ್ರಕಲಾ ಶಿಕ್ಷಕ ಬಿ.ಆರ್. ಸತೀಶ್ ಹಾಗೂ ಶಿಕ್ಷಕಿಯರು ಕಾರ್ಯಕ್ರಮ ನಡೆಸಿಕೊಟ್ಟರು.ನಾಪೋಕ್ಲು: ಬಲ್ಲಮಾವಟಿ ಗ್ರಾಮದ ಆರೋಗ್ಯ ಕ್ಷೇಮ ಕೇಂದ್ರ, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೇತಾಜಿ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಮಾತನಾಡಿದರು.

ಗ್ರಾ.ಪಂ. ಅಧ್ಯಕ್ಷ ಮುಕ್ಕಾಟಿರ ಸುತನ್ ಸುಬ್ಬಯ್ಯ ಮಾತನಾಡಿದರು. ಬಲ್ಲಮಾವಟಿ ಆಯುಷ್ ಕೇಂದ್ರದ ಡಾ. ಶುಭ ಪ್ರಸ್ತಾವಿಕವಾಗಿ ಮಾತನಾಡಿ, ಯೋಗವನ್ನು ಮಾಡುವುದರ ಮೂಲಕ ಶಿಸ್ತುಬದ್ಧ ಬದುಕನ್ನು ನಡೆಸಲು ಸಾಧ್ಯ ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ತರ ಸ್ಥಾನವಿದೆ.

ಜೂನ್ ೨೧ ವರ್ಷದಲ್ಲಿ ಅತ್ಯಂತ ಹೆಚ್ಚು ಹಗಲುಳ್ಳ ದಿನವಾಗಿದ್ದು ಆ ದಿನವನ್ನು ಅಂರ‍್ರಾಷ್ಟಿçÃಯ ಯೋಗ ದಿನವನ್ನಾಗಿ ಆಚರಿಸ ಲಾಗುತ್ತಿದೆ ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಬಾಳೆಯಡ ದೀನಾ ಮಾಯಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರತ್ ಪೂಣಚ್ಚ ಉಪಸ್ಥಿತರಿದ್ದರು.

ವಿವಿಧ ಶಾಲಾ-ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕ ವೃಂದ ಪಾಲ್ಗೊಂಡಿದ್ದರು.

ಕುಶಾಲನಗರ: ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಬೋಧಕ-ಬೋಧಕೇತರ ಸಿಬ್ಬಂದಿಗಳು ಯೋಗ ಅಭ್ಯಾಸದಲ್ಲಿ ತೊಡಗಿಸಿಕೊಂಡರು.

ಇAಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಕುಮಾರ್ ಅವರ ಯೋಗ ಕಾರ್ಯಕ್ರಮಕ್ಕೆ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕಾಲೇಜು ವಿದ್ಯಾರ್ಥಿ ತೇಜಸ್ ಅವರ ಮಾರ್ಗದರ್ಶನದಲ್ಲಿ ನಡೆದ ಯೋಗ ತರಬೇತಿಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವೀರಾಜಪೇಟೆ: ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ದೇವಣಗೇರಿ ಬಿ.ಸಿ. ಪ್ರೌಢಶಾಲೆಯ ಶಾಲಾ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಪಿ.ಎ. ಲಕ್ಷಿö್ಮà ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ ಅವರು ಆಗಮಿಸಿ ಮಾತನಾಡಿ, ಯೋಗವು ಮನಶುದ್ಧಿ, ಬಾಹ್ಯಶುದ್ಧಿ ಮಾಡಿ ಕಲ್ಮಶಗಳನ್ನು ತೊಡೆದು ಹಾಕುತ್ತದೆ ಎಂದು ತಿಳಿಸುತ್ತಾ ವಿದ್ಯಾರ್ಥಿಗಳು ಇದನ್ನು ಬಿಡದೆ ಮುಂದೆ ಕೂಡ ಮುಂದುವರಿಸಿ ಎಂದು ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಿ.ಎ. ಲಕ್ಷಿö್ಮÃ ನಾರಾಯಣ ಅವರು ಮಾತನಾಡಿ, ಯೋಗ ಎಂದರೆ ಆಸನ ಅಲ್ಲ. ಅದೊಂದು ಜೀವನ ಪದ್ಧತಿ, ಇದರ ಮೂಲ ಪುರುಷ ಪತಂಜಲಿಯವರು ಎಂದು ತಿಳಿಸಿಕೊಟ್ಟು ಯೋಗದಿಂದ ಆಗುವ ಹಲವಾರು ಉಪಯೋಗಗಳನ್ನು ತಿಳಿಸುತ್ತಾ ಹಾಗೂ ಆರೋಗ್ಯವಂತರಾಗಿ ಇರಲು ಇದು ತುಂಬಾ ಉಪಕಾರಿ ಎಂದರು. ವಿದ್ಯಾರ್ಥಿಗಳು ಯೋಗವನ್ನು ಕಲಿತರೆ ತುಂಬಾ ಸದುಪಯೋಗವಾಗುವ ವಿಚಾರವನ್ನು ಸಭೆಯಲ್ಲಿ ವಿವರಿಸಿದರು. ಇದರಿಂದ ಮಕ್ಕಳು ಕಲಿತು ಇತರರಿಗೂ ಕಲಿಸುವಂತೆ ತಿಳಿಹೇಳಿದರು.

ಶಾಲಾ ವಿದ್ಯಾರ್ಥಿಗಳಿಂದ ಯೋಗದ ಪ್ರಾತ್ಯಕ್ಷತೆಯನ್ನು ಯೋಗ ಗುರುಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಪಿ.ಎ. ಲಕ್ಷಿö್ಮÃ ನಾರಾಯಣ ಅವರು ಯೋಗದ ಮಂತ್ರದೊAದಿಗೆ ಹಾಗೂ ಹಲವಾರು ಆಸನಗಳನ್ನು ಮಾಡುತ್ತ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಚೆಂಬೆಬೆಳಿಯೂರು ಗ್ರಾಮ ಪಂಚಾಯಿತಿ ಸದಸ್ಯ ಪುಗ್ಗೇರ ಕಾಂತಿ, ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಜರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಸ್ವಾಗತವನ್ನು ಶಾಲಾ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಅವರು ನೆರವೇರಿಸಿದರು. ನಿರೂಪಣೆಯನ್ನು ಶಿಕ್ಷಕಿ ವೈ. ಪ್ರಮೀಳಾ ಕುಮಾರಿ ಮಾಡಿ ಶಿಕ್ಷಕಿ ಎ.ಸಿ. ಸುನೀತ ವಂದಿಸಿದರು.ಕೂಡಿಗೆ: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಮಕ್ಕಳು ಯೋಗಾಭ್ಯಾಸ ಪ್ರದರ್ಶಿಸಿದರು.

ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್. ಸುಕುಮಾರಿ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು.

ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಬಿ.ಎಸ್. ಅನ್ಸಿಲಾ ರೇಖಾ ಇತರರು ಇದ್ದರು.

ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತುದಾರ ಡಿ.ವಿ. ಗಣೇಶ್, ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್. ಸುಜಾತ ಹಾಗೂ ಶಿಕ್ಷಕರು ಇದ್ದರು.ಚೆಟ್ಟಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಡಕರೆಯಲ್ಲಿ ೯ನೇ ವಿಶ್ವ ಯೋಗ ದಿನಾಚರಣೆಯನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೂರ್ಯ ನಮಸ್ಕಾರ ಹಾಗೂ ಪ್ರಣಾಯಾಮ ಮಾಡಿ ಆಚರಿಸಿದರು.

ದೈಹಿಕ ಶಿಕ್ಷಕ ದಿನಕರ ಶೆಟ್ಟಿ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಶಾಲಾ ಸಹ ಶಿಕ್ಷಕ ರತೀಶ್ ಸಹಕರಿಸಿದರು. ಸಹ ಶಿಕ್ಷಕಿ ಜನಿತಾ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕ ಧನು ಪ್ರಕಾಶ ವಂದಿಸಿದರು.ಸೋಮವಾರಪೇಟೆ: ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಸ್ಥಳೀಯರಾದ ದಿವ್ಯಕುಮಾರ್ ಅವರುಗಳು ಉಪಸ್ಥಿತರಿದ್ದರು. ಶ್ರೀಕುಮಾರಲಿಂಗೇಶ್ವರ ಪ್ರೌಢಶಾಲೆ ಹಾಗೂ ಶಾಂತಳ್ಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು.ಶನಿವಾರಸಂತೆ: ಪಟ್ಟಣದ ಸುರಭಿ ಹೋಲಿಸ್ಟಿಕ್ ಯೋಗ ಸ್ಟೂಡಿಯೋ ವತಿಯಿಂದ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಸದಸ್ಯೆಯರು ಮಾರ್ಗದರ್ಶಕ ಶಿಕ್ಷಕಿ ಬೀನಾ ಅರವಿಂದ್ ಅವರ ನಿರ್ದೇಶನದಲ್ಲಿ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಬೀನಾ ಅರವಿಂದ್ ಮಾತನಾಡಿ, ನಮ್ಮ ಆರೋಗ್ಯ ರಕ್ಷಣೆ ನಮ್ಮ ಕೈಯಲ್ಲೇ ಇದೆ. ಪ್ರತಿಯೊಬ್ಬರು ಯೋಗದ ಮಹತ್ವವನ್ನು ಅರಿತು ಉಳಿಸಿಕೊಳ್ಳಬೇಕು. ಯೋಗ ಜೀವನ ಕ್ರಮದಿಂದ ಉತ್ತಮ ಆರೋಗ್ಯ ಮಾತ್ರವಲ್ಲ. ಆರೋಗ್ಯದ ಪರಮ ಸ್ಥಿತಿಯಾದ ಪರಿಪೂರ್ಣ ಆನಂದವನ್ನು ಅನುಭವಿಸಬಹುದು.ಯೋಗ ಓದಿ ತಿಳಿಯುವ ಮಾಡಿ ಕಲಿಯುವ ವಿದ್ಯೆ. ವಿವಿಧ ಕಾಯಿಲೆಗಳಿಗೆ ಯೋಗ ಪೂರ್ಣ ಪರಿಹಾರ ಕಲ್ಪಿಸಿ ಹೊಸ ಜೀವನ ನಡೆಸುವ ದಿಕ್ಸೂಚಿಯೂ ಹೌದು. ಸಂಪತ್ತು, ಸೌಲಭ್ಯಕ್ಕಿಂತ ವ್ಯಕ್ತಿಯ ಆರೋಗ್ಯ, ನೆಮ್ಮದಿ ಮುಖ್ಯವಾಗಿದ್ದು ಯೋಗ ಒಂದು ಸಮಗ್ರ ಚಿಕಿತ್ಸೆಯಾಗಿದೆ ಎಂದರು.

ಸದಸ್ಯೆಯರಾದ ಚೈತ್ರಾ, ಅರ್ಪಿತಾ, ಗೀತಾ, ಅನ್ನಪೂರ್ಣ, ಶೋಭಾ ಶಾಂತರಾಜ್, ಕೋಮಲಾ, ವಿದ್ಯಾ, ಶೋಭಾ ರಮೇಶ್, ಪೂರ್ಣಿಮಾ, ಭುವನಾ, ದಿವ್ಯಾ ಇದ್ದರು.ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮಂಗಳ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಸೋಮಯಂಡ ದಿಲೀಪ್ ಅಪ್ಪಚ್ಚು ಹಾಗೂ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ದೀಪ ಬೆಳಗುವುದ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿದರು. ಮಕ್ಕಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕಿ ಕೆ. ತಿಲಕ, ಶಾಲಾ ಆಡಳಿತ ಮಂಡಳಿ ನಿರ್ದೆಶಕರುಗಳಾದ ಪಳಂಗAಡ ಗೀತಾ ಸುಬ್ಬಯ್ಯ, ಕೊಂಗAಡ ವಿಜಯ ಮುತ್ತಣ, ಶಾಲಾ ಶಿಕ್ಷಕ ವೃಂದ ಭಾಗವಹಿಸಿತ್ತು.

(ಮುಂದುವರಿಯುವುದು)ಪೊನ್ನAಪೇಟೆ: ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನ ಆಚರಿಸಲಾಯಿತು. ದೈಹಿಕ ಶಿಕ್ಷಕ ಮಾಚಂಗಡ ಅಯ್ಯಪ್ಪ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ವಿದ್ಯಾರ್ಥಿಗಳಾದ ಗ್ರೀಷ್ಮಿತ ಮತ್ತು ಮಿನ್ಹಾ ದಿನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಪ್ರಾಂಶುಪಾಲೆ ಗೀತಾ ನಾಯ್ಡು, ಶಾಲಾ ಆಡಳಿತ ಮಂಡಳಿ ನಿರ್ದೇಶಕಿ ಮಾರ್ಗರೇಟ್, ಶಿಕ್ಷಕಿಯರಾದ ಅಶ್ವಿನಿ, ಶಿಲ್ಪ, ಯಶಸ್ವಿನಿ, ಸೀಮಾ ಮತ್ತು ಸಮೀಲಾ ಹಾಗೂ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.